Tuesday, January 21, 2025
Tuesday, January 21, 2025

ಮಕ್ಕಳಿಗೆ ಭಜನಾ ಸಂಸ್ಕಾರ ನೀಡಿ: ನಾಡೋಜ ಡಾ. ಜಿ.ಶಂಕರ್

ಮಕ್ಕಳಿಗೆ ಭಜನಾ ಸಂಸ್ಕಾರ ನೀಡಿ: ನಾಡೋಜ ಡಾ. ಜಿ.ಶಂಕರ್

Date:

ಕೋಟ, ಏ.15: ಪ್ರಸ್ತುತ ಯುವ ಸಮುದಾಯದಲ್ಲಿ ಸಂಸ್ಕಾರ ನೀಡುವ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಪ್ರತಿ ಮನೆಯಲ್ಲಿ ಭಜನಾ ಸಂಸ್ಕಾರ ನೀಡಿ ಎಂದು ನಾಡೋಜ ಡಾ.ಜಿ.ಶಂಕರ್ ಕರೆ ನೀಡಿದರು. ಕೋಡಿ ಕನ್ಯಾನದ ಮಹಾಸತೀಶ್ವರಿ ದೇಗುಲದ ವಠಾರದಲ್ಲಿ ಪ್ರಗತಿ ಯುವಕ ಸಂಘ ಕೋಡಿ ಕನ್ಯಾನ ಇದರ ತ್ರೀಂಶತಿ ಮಹೋತ್ಸವದ ಪ್ರಗತಿಪಥ ಶೀರ್ಷಿಕೆಯಡಿ ಭಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿಂದಿನ ಕಾಲಘಟ್ಟದಲ್ಲಿ ಹಸಿವು ಆವರಿಸಿದರೂ ಭಜನಾ ಸಂಸ್ಕಾರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದರು. ಆದುದರಿಂದ ನೈಜ ಜೀವನ ಕಾಣಲು ಸಾಧ್ಯವಾಗಿದೆ, ಸಂಘ ಸಂಸ್ಥೆಗಳ ಭಜನಾ ಸಂಕೀರ್ತನೆಗೆ ಹೆಚ್ಚಿನ ಒತ್ತು ನೀಡುವಂತಾಗಲಿ ಎಂದು ಹಾರೈಸಿದರು. ಧಾರ್ಮಿಕ ಭಜನೆ, ಶನೀಶ್ವರ ಕಥಾಶ್ರವಣಕಾರರಾದ ಸಂಜೀವ ಪೂಜಾರಿ ಕೋಡಿ, ಚಂದ್ರಶೇಖರ್ ಅಮೀನ್, ಅಣ್ಣಪ್ಪ ಸಾಲಿಯಾನ್ ಪರವಾಗಿ ದೇವಕಿ ಮೆಂಡನ್ ಇವರುಗಳನ್ನು ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪ್ರಗತಿ ಯುವಕ ಸಂಘದ ಅಧ್ಯಕ್ಷ ಜಗನಾಥ್ ಅಮೀನ್ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಮೊಗವೀರ ಯುವ ಸಂಘದ ಜಿಲ್ಲಾಧ್ಯಕ್ಷ ಜಯಂತ್ ಅಮೀನ್, ಉದ್ಯಮಿ ನರಸಿಂಹ ಪೂಜಾರಿ, ಕಟೀಲು ಶ್ರೀ ದುರ್ಗಾಪರಮೇಶ್ವರಿ ಕಾಲೇಜಿನ ಪ್ರಾಂಶುಪಾಲ ಡಾ.ಕೆ ಕೃಷ್ಣ ಕಾಂಚನ್, ಶ್ರೀ ಮಹಾಸತೀಶ್ವರಿ ದೇಗುಲದ ಅಧ್ಯಕ್ಷ ದೇವದಾಸ್ ಸಾಲಿಯಾನ್, ಸಂಘದ ಪ್ರಮುಖರಾದ ಪ್ರಭಾಕರ ಮೆಂಡನ್, ಉದಯ್ ತಿಂಗಳಾಯ ಉಪಸ್ಥಿತರಿದ್ದರು. ಸಂಘದ ತ್ರೀಂಶತಿ ಮಹೋತ್ಸವದ ಅಧ್ಯಕ್ಷ ಸಂತೋಷ್ ಅಮೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಕಾರ್ಯದರ್ಶಿ ಪ್ರವೀಣ್ ಕಾಂಚನ್ ಸ್ವಾಗತಿಸಿ, ಮಂಜುನಾಥ ಹಿಲಿಯಾಣ ಕಾರ್ಯಕ್ರಮ ನಿರೂಪಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಭಜನಾ ತಂಡಗಳಿಂದ ಕುಣಿತ ಭಜನಾ ಸ್ಪರ್ಧೆ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!