Monday, November 25, 2024
Monday, November 25, 2024

ಅಂಬೇಡ್ಕರ್ ವ್ಯಕ್ತಿಯಲ್ಲ ಶಕ್ತಿ

ಅಂಬೇಡ್ಕರ್ ವ್ಯಕ್ತಿಯಲ್ಲ ಶಕ್ತಿ

Date:

ಕೋಟ, ಏ.15: ಜಗತ್ತಿಗೆ ಮಾದರಿ ಎನಿಸಿದ ಸಂವಿಧಾನವನ್ನು ಈ ದೇಶಕ್ಕೆ ಬಳುವಳಿಯಾಗಿ ನೀಡಿದ ಡಾ.ಬಿ.ಆರ್ ಅಂಬೇಡ್ಕರ್ ರವರು ವ್ಯಕ್ತಿಯಲ್ಲ ಬದಲಾಗಿ ಅವರೊಬ್ಬ ಶಕ್ತಿ ಎಂದು ಸಾಹಿತಿ ಶಿಕ್ಷಕ ಸಂತೋಷ್ ಕುಮಾರ್ ಕೋಟ ಹೇಳಿದರು. ಕೋಟ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಹಾಗೂ ಇಂಡಿಕಾ ಕಲಾ ಬಳಗ ಮಣೂರು ಪಡುಕರೆ ಆಶ್ರಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ 133 ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಭನಮನಗೈದು ಅವರು ಮಾತನಾಡಿದರು.

ಪ್ರಸ್ತುತ ಜಾತಿ, ಮತ ಧರ್ಮದ ಆಧಾರದಲ್ಲಿ ತೂಗುತ್ತಿರುವ ಕಾಲಘಟ್ಟದಲ್ಲಿ ಅಂಬೇಡ್ಕರ್ ಸಂವಿಧಾನದ ಆಶಯಗಳನ್ನು ತಿಳಿಯಪಡಿಸಬೇಕಿದೆ, ವಿಶ್ವ ಮಟ್ಟದಲ್ಲಿ ಅಂಬೇಡ್ಕರ್ ಚಿಂತನೆ, ಆದರ್ಶ ಎಲ್ಲಾ ವರ್ಗಕ್ಕೆ ಸಮಾನತೆಯನ್ನು ಸಾರಿ ಬುದ್ಧ ಬಸವಣ್ಣ ನಾರಾಯಣಗುರುಳಂತೆ ಅಂಬೇಡ್ಕರ್ ಸದಾ ಕ್ರೀಯಾಶೀಲತೆಯನ್ನು ಮೈಗೂಡಿಸಿಕೊಂಡು ಪ್ರತಿಯೊಬ್ಬರಿಗೂ ಆದರ್ಶ. ಅವರು ನೀಡಿದ ಸಂವಿಧಾನದ ಶ್ರೇಷ್ಠತೆ ಸಾಮಾನ್ಯವರ್ಗಕ್ಕೆ ವರವಾಗಿ ಪರಿಣಮಿಸಿದೆ. ಇಂಥಹ ಮಹಾನ್ ಚೇತನ ಬದುಕಿನ ಆಯಾಮವನ್ನು ಪ್ರಸ್ತುತ ಜನಾಂಗಕ್ಕೆ ತಿಳಿ ಹೇಳುವ ಕಾರ್ಯ ಯುವಕ ಮಂಡಲಗಳಿಂದ ಆಗಬೇಕಿದೆ. ಇದೇ ಮೊದಲ ಬಾರಿ ಸರಕಾರಿ ಕಾರ್ಯಕ್ರಮಗಳಂತೆ ಪಂಚವರ್ಣ, ಇಂಡಿಕಾ ಸಂಸ್ಥೆಗಳು ಆಚರಿಸುತ್ತಿರುವುದು ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಪಂಚವರ್ಣದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕೋಟ ಅಮೃತೇಶ್ವರಿ ದೇಗುಲದ ನಿಕಟಪೂರ್ವ ಟ್ರಸ್ಟಿ ಎಂ.ಸುಬ್ರಾಯ ಆಚಾರ್, ಇಂಡಿಕಾ ಕಲಾ ಬಳಗದ ಪ್ರಭಾಕರ್ ಮಣೂರು ಪಡುಕರೆ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಪ್ರಧಾನ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿ, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!