Sunday, January 19, 2025
Sunday, January 19, 2025

ಜಿಲ್ಲೆಯಲ್ಲಿ 73995 ಮಕ್ಕಳಿಗೆ ಪೋಲಿಯೋ ಲಸಿಕೆ: ಉಡುಪಿ ಡಿಸಿ

ಜಿಲ್ಲೆಯಲ್ಲಿ 73995 ಮಕ್ಕಳಿಗೆ ಪೋಲಿಯೋ ಲಸಿಕೆ: ಉಡುಪಿ ಡಿಸಿ

Date:

ಉಡುಪಿ: ಫೆಬ್ರವರಿ 27 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 0-5 ವರ್ಷದೊಳಗಿನ 73995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ 0-5 ವರ್ಷದೊಳಗೆ ಗ್ರಾಮೀಣ ಪ್ರದೇಶದ 61105 ಮತ್ತು ನಗರ ಪ್ರದೇಶದ 12890 ಸೇರಿದಂತೆ ಒಟ್ಟು 73995 ಮಕ್ಕಳಿಗೆ ಫೆಬ್ರವರಿ 27 ರಂದು ಪಲ್ಸ್ ಪೋಲಿಯೋ ಲಸಿಕೆ ನೀಡಲು, ಗ್ರಾಮೀಣ ಪ್ರದೇಶದಲ್ಲಿ 571 ಹಾಗೂ ನಗರ ಪ್ರದೇಶದಲ್ಲಿ 91 ಸೇರಿದಂತೆ ಒಟ್ಟು 662 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು.

ಇದಲ್ಲದೆ 6 ಮೊಬೈಲ್ ಟೀಮ್ ಮತ್ತು 36 ಟ್ರಾನ್ಸಿಟ್ ಬೂತ್ಗಳನ್ನು ಹಾಗೂ ಎಲ್ಲಾ ಟೋಲ್ಗೇಟ್ಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆದು ಲಸಿಕೆ ನೀಡಲಾಗುವುದು ಎಂದರು. ಲಸಿಕಾ ಕಾರ್ಯಕ್ರಮದಲ್ಲಿ 2794 ಲಸಿಕಾ ಸ್ವಯಂಸೇವಕರು ಮತ್ತು 125 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಲಿದ್ದು, ಆರೋಗ್ಯ, ಪಂಚಾಯತ್ ರಾಜ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಂದಾಯ ಇಲಾಖೆ ಮತ್ತು ಇತರೆ ಇಲಾಖೆಗಳು, ರೋಟರಿ ಹಾಗೂ ಇತರ ಸ್ವಯಂಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಹಾಗೂ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದರು.

ಜಿಲ್ಲೆಯ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು. ಕಾರ್ಯಕ್ರಮದ ಉದ್ಘಾಟಣೆಯನ್ನು ಫೆಬ್ರವರಿ 27 ರಂದು ಬೆಳಗ್ಗೆ 8 ಗಂಟೆಗೆ ಸರಕಾರಿ ಕೂಸಮ್ಮ ಶಂಭುಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಆಸ್ಪತ್ರೆ ಉಡುಪಿಯಲ್ಲಿ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು, ವಲಸೆ ಕಾರ್ಮಿಕರು, ಕೊಳಚೆ ನಿವಾಸಿಗಳು, ತಮ್ಮ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಹಾಕಿಸಿ, ಮಕ್ಕಳನ್ನು ಪೋಲಿಯೋದಿಂದ ರಕ್ಷಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಮನವಿ ಮಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂದನ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಎಂ.ಜಿ.ರಾಮ, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!