ಉಡುಪಿ, ಏ.23: ಮಲ್ಪೆ ಬೀಚ್ ಪ್ರದೇಶಕ್ಕೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಬೀಚ್ ಪ್ರದೇಶದಲ್ಲಿ ಸೂಚಿಸಿರುವಂತಹ ಸುರಕ್ಷತಾ ಮಾಹಿತಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಮದ್ಯಪಾನ ಮಾಡಿ ನೀರಿಗೆ ಇಳಿಯುವುದು, ಕಡಲ ತೀರದ ಅನಧಿ ದೂರದಲ್ಲಿ ಈಜುವುದು ಹಾಗೂ ಅಪಾಯವಿರುವಂತಹ ಸ್ಥಳದಲ್ಲಿ ನೀರಿನ ಇಳಿಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. ಈ ಸೂಚನೆಗಳನ್ನು ಉಲ್ಲಂಘಿಸುವ ಪ್ರವಾಸಿಗರ ಮೇಲೆ ದಂಡ ವಿಧಿಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಮಲ್ಪೆ ಬೀಚ್: ಪ್ರವಾಸಿಗರು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ

ಮಲ್ಪೆ ಬೀಚ್: ಪ್ರವಾಸಿಗರು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ
Date: