ಉಡುಪಿ, ಏ.24: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ವತಿಯಿಂದ 5,700 ರೂ. ಮೌಲ್ಯದ 10.800 ಲೀ. ಮದ್ಯ ವಶಪಡಿಸಿಕೊಳ್ಳಲಾಗಿರುತ್ತದೆ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಯಾವುದೇ ಸಕ್ಷಮ ಪ್ರಾಧಿಕಾರ ಮತ್ತು ಚುನಾವಣಾ ಅಧಿಕಾರಿಯವರಿಂದ ಪೂರ್ವಾನುಮತಿಯನ್ನು ಪಡೆದುಕೊಳ್ಳದೇ ಬನ್ನಂಜೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿನ ಫ್ಲಾಟ್‌ಫಾರ್ಮ್ನ ಎರಡು ಕಂಬಗಳಿಗೆ ಹಾಗೂ ಕರಾವಳಿ ಬೈಪಾಸ್ ಫ್ಲೈ ಓವರ್ ಕೆಳಗಡೆಯ ಗೋಡೆಯ ಮೇಲೆ ಒಂದು ಪಕ್ಷದ ವಿರುದ್ಧವಾಗಿ ಪ್ರಕಾಶಕರ ವಿವರ ನಮೂದಿಸದೇ ಮುದ್ರಿಸಿರುವ ಪೋಸ್ಟರ್‌ಗಳನ್ನು ಅಂಟಿಸಿರುವ ಬಗ್ಗೆ ಹಾಗೂ ಉಡುಪಿ ನಗರದ ಜೋಡುಕಟ್ಟೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್‌ಳ ಕೊಲೆ ಪ್ರಕರಣವನ್ನು ವಿರೋಧಿಸಿ ಪ್ರತಿಭಟನೆಯನ್ನು ಯಾವುದೇ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೇ ನಡೆಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆಗಳು ದಾಖಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನೀತಿ ಸಂಹಿತೆ ಉಲ್ಲಂಘನೆ: ಮದ್ಯ ವಶ
ನೀತಿ ಸಂಹಿತೆ ಉಲ್ಲಂಘನೆ: ಮದ್ಯ ವಶ
Date: