ಉಡುಪಿ, ಏ.29: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ 2009-2011 ಸಾಲಿನ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು ಕೊಡುಗೆಯಾಗಿ ನೀಡಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ರೂ. 6 ಸಾವಿರ ಮೌಲ್ಯದ ಪುಸ್ತಕಗಳನ್ನು ಕಾಲೇಜಿನ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಲಾಯಿತು. ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ ಅವರಿಗೆ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಗಣೇಶ್ ಪ್ರಸಾದ್ ಜಿ. ನಾಯಕ್ ಅವರು ಸೋಮವಾರ ಪುಸ್ತಕಗಳನ್ನು ಹಸ್ತಾಂತರಿಸಿದರು. ಶೈಕ್ಷಣಿಕ ಸಲಹೆಗಾರ ಪ್ರೊ. ಪ್ರಸಾದ್ ರಾವ್, ಸಮಾಜಕಾರ್ಯ ಸಂಯೋಜಕರಾದ ಡಾ. ದುಗ್ಗಪ್ಪ ಕಜೆಕಾರ್, ಸಮಾಜಶಾಸ್ತ್ರ ಮುಖ್ಯಸ್ಥರಾದ ಡಾ. ರಾಘವ ನಾಯ್ಕ್, ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ ಉಪಸ್ಥಿತರಿದ್ದರು.
ತೆಂಕನಿಡಿಯೂರು ಕಾಲೇಜಿನ ಗ್ರಂಥಾಲಯಕ್ಕೆ ಸಮಾಜಕಾರ್ಯ ಹಳೆ ವಿದ್ಯಾರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಕೊಡುಗೆ

ತೆಂಕನಿಡಿಯೂರು ಕಾಲೇಜಿನ ಗ್ರಂಥಾಲಯಕ್ಕೆ ಸಮಾಜಕಾರ್ಯ ಹಳೆ ವಿದ್ಯಾರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಕೊಡುಗೆ
Date: