ಉಡುಪಿ, ಏ.29: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ದಿನದಂದು ಕರ್ತವ್ಯಕ್ಕಾಗಿ ನೇಮಕ ಮಾಡಿರುವ ಪಿ.ಆರ್.ಓ, ಎ.ಪಿ.ಆರ್.ಓ ಹಾಗೂ ಪಿ.ಓ ಗಳಿಗೆ ಮೇ 1 ರಂದು ಬೈಂದೂರಿನ ನಿತ್ಯಾಧರ ನಗರದ ಸೈಂಟ್ ತೋಮಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಎರಡನೇ ಹಂತದ ತರಬೇತಿ ಕಾರ್ಯಗಾರವನ್ನು ಏರ್ಪಡಿಸಲಾಗಿದೆ. ಎರಡನೇ ಹಂತದ ತರಬೇತಿಗೆ ನಿಯೋಜಿಸಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಗಾರಕ್ಕೆ ಭಾಗವಹಿಸಲು ಅನುಕೂಲ ವಾಗುವಂತೆ ಉಚಿತ ಬಸ್ಸುಗಳ ವ್ಯವಸ್ಥೆಯನ್ನು ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡಲಾಗಿದೆ. ತರಬೇತಿ ಸ್ಥಳಗಳಿಗೆ ಪ್ರಯಾಣಿಸಲು ಈ ಕೆಳಗೆ ತಿಳಿಸಿರುವ ಸ್ಥಳಗಳಿಂದ ಬಸ್ಸುಗಳು ಹೊರಡಲಿದೆ. ಕುಂದಾಪುರ ವಿಧಾನ ಸಭಾ ಕ್ಷೇತ್ರದಿಂದ ಗಾಂಧಿ ಮೈದಾನ ಕುಂದಾಫುರ ಇಲ್ಲಿಂದ ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9341049161, 8197809032, 7483054340, ಉಡುಪಿ ವಿಧಾನ ಸಭಾ ಕ್ಷೇತ್ರದಿಂದ ಬೋರ್ಡು ಹೈಸ್ಕೂಲ್ ಉಡುಪಿ ಇಲ್ಲಿಂದ ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9164146545, 9844218717,9880913596, ಕಾಪು ವಿಧಾನ ಸಭಾ ಕ್ಷೇತ್ರದಿಂದ ಸರ್ವಿಸ್ ಬಸ್ ನಿಲ್ದಾಣ ಕಾಪು ಇಲ್ಲಿಂದ ಮೊ. ಸಂ.9972716555, 9845162068, 8095101024 ಹಾಗೂ ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಬಂಡೀಮಠ ಬಸ್ ನಿಲ್ದಾಣದಿಂದ ಹೆಚ್ಚಿನ ಮಾಹಿತಿಗಾಗಿ ಮೊ.ಸಂ.8197028646, 8277404724, 8073752849, ಸಂಪರ್ಕಿಸಬಹುದು. ಮತದಾನ ದಿನದಂದು ಕರ್ತವ್ಯಕ್ಕೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಗಳು ಮೇ1 ರಂದು ಪೂರ್ವಾಹ್ನ 7.00 ಗಂಟೆಗೆ ಸದ್ರಿ ಸ್ಥಳಗಳಲ್ಲಿ ಹಾಜರಿರಲು ತಿಳಿಸಿದೆ. ಎಲ್ಲಾ ಮತಗಟ್ಟೆ ಸಿಬ್ಬಂದಿಗಳು ಕಡ್ಡಾಯವಾಗಿ ತರಬೇತಿಗೆ ಹಾಜರಾಗತಕ್ಕದ್ದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ 1: ಮತದಾನ ಕೇಂದ್ರದ ಸಿಬ್ಬಂದಿಗಳಿಗೆ ಎರಡನೇ ಸುತ್ತಿನ ತರಬೇತಿ
ಮೇ 1: ಮತದಾನ ಕೇಂದ್ರದ ಸಿಬ್ಬಂದಿಗಳಿಗೆ ಎರಡನೇ ಸುತ್ತಿನ ತರಬೇತಿ
Date: