ಕೋಟ, ಮೇ 5: ಮಕ್ಕಳ ಆಲೋಚನೆಗಳು, ಭಾವನೆಗಳು ವಿಭಿನ್ನವಾಗಿರುತ್ತದೆ. ಅವರಲ್ಲಿಯೂ ನೂರಾರು ಕನಸುಗಳು ಗುರಿಗಳು ಮನದಲ್ಲಿ ಅಡಕವಾಗಿರುತ್ತದೆ. ಅದನ್ನು ಸಾಧಿಸಿ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಮಕ್ಕಳ ಭಾವನೆಗಳು ತೆರೆದು ಸಮಾಜದ ಮುಂದೆ ಅನಾವರಣವಾಗಲು ಬೇಸಿಗೆ ಶಿಬಿರಗಳು ಸಹಾಯವಾಗುತ್ತಿರುವುದು ಶ್ಲಾಘನೀಯ ಎಂದು ನಿಸ್ವಾರ್ಥ ಸೇವಾ ಟ್ರಸ್ಟ್ ಕೋಟದ ಸದಸ್ಯ ಪ್ರದೀಪ್ ಪೂಜಾರಿ ಅವರು ಹೇಳಿದರು. ಅವರು ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ಗೀತಾನಂದ ಫೌಂಡೇಶನ್ ಮಣೂರು ಪಡುಕರೆ, ಉಸಿರು ಕೋಟ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಕೋಟತಟ್ಟು ಗ್ರಾಮ ಪಂಚಾಯತ್ ಅವರ ಆಶ್ರಯದಲ್ಲಿ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕರಾವಳಿ ಕಣ್ಮಣಿ ಮತ್ಸೋದ್ಯಮಿ ದಿ. ಕೆ.ಸಿ ಕುಂದರ್ ಸ್ಮರಣಾರ್ಥವಾಗಿ ನಡೆಯುವ 24 ನೇ ವರ್ಷದ ಬೇಸಿಗೆ ಶಿಬಿರ ವಿಕಸನ-2024 ಐದನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಬಿರದ ನಿರ್ದೇಶಕ ನರೇಂದ್ರ ಕುಮಾರ್ ಕೋಟ, ಸತೀಶ್ ವಡ್ಡರ್ಸೆ, ಶಿಬಿರದ ತಂಡಗಳ ನಾಯಕರು ಉಪಸ್ಥಿತರಿದ್ದರು.
ಮಕ್ಕಳ ಕನಸಿನ ಬುತ್ತಿ ತೆರೆಯುವ ಪ್ರಯತ್ನವಾಗಬೇಕು: ಪ್ರದೀಪ್ ಪೂಜಾರಿ
ಮಕ್ಕಳ ಕನಸಿನ ಬುತ್ತಿ ತೆರೆಯುವ ಪ್ರಯತ್ನವಾಗಬೇಕು: ಪ್ರದೀಪ್ ಪೂಜಾರಿ
Date: