Home ಸುದ್ಧಿಗಳು ಪ್ರಾದೇಶಿಕ ಕಾರ್ಕಳ ಜ್ಞಾನಸುಧಾ: ಅರ್ಹ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಅಹ್ವಾನ

ಕಾರ್ಕಳ ಜ್ಞಾನಸುಧಾ: ಅರ್ಹ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಅಹ್ವಾನ

279
0

ಗಣಿತನಗರ, ಮೇ 9: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ 5 ರಿಂದ 10 ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಸ್ಥಳೀಯ ಬಡ ಅರ್ಹ ಮಕ್ಕಳಿಗೆ ನೀಡಲಾಗುತ್ತಿದ್ದು, ಕಳೆದ ಶೈಕ್ಷಣಿಕ ವರ್ಷದಿಂದ ಈ ಉಚಿತ ಶಿಕ್ಷಣವನ್ನು ಕಾಲೇಜು ವಿಭಾಗದಲ್ಲಿ ವಾಣಿಜ್ಯ ವಿಭಾಗಕ್ಕೂ ವಿಸ್ತರಿಸಲಾಗಿದೆ. ಪ್ರಸ್ತುತ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಇಕೋನಾಮಿಕ್ಸ್, ಬಿಸಿನೆಸ್ ಸ್ಟಡಿಸ್, ಎಕೌಂಟೆನ್ಸಿ ಮತ್ತು ಸ್ಟ್ಯಾಟಿಸ್ಟಿಕ್ಸ್ ಅಥವಾ ಇಕೋನಾಮಿಕ್ಸ್, ಬಿಸಿನೆಸ್ ಸ್ಟಡಿಸ್, ಎಕೌಂಟೆನ್ಸಿ ಮತ್ತು ಕಂಪ್ಯೂಟರ್ ಸೈನ್ಸ್ಸಂ ಯೋಜನೆಯಿದ್ದು, 2024- 25ನೇ ಶೈಕ್ಷಣಿಕ ಸಾಲಿಗೆ ದಾಖಲಾತಿ ಬಯಸುವ, ಹತ್ತನೇ ತರಗತಿಯಲ್ಲಿ ಸಿ.ಬಿಎಸ್.ಇ / ಐ.ಸಿ.ಎಸ್.ಇ ಬೋರ್ಡ್ನಲ್ಲಿ ಶೇ 90 ಕ್ಕಿಂತ ಅಧಿಕ ಅಂಕ ಹಾಗೂ ರಾಜ್ಯ ಪಠ್ಯಕ್ರಮದಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ಸ್ಥಳೀಯ ವಿದ್ಯಾರ್ಥಿಗಳು ಈ ಉಚಿತ ಶಿಕ್ಷಣದ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೇಲಿನ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅಥವಾ ಪೋಷಕರು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು ನೊಂದಾಯಿಸಿಕೊಳ್ಳಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.