ಉಡುಪಿ, ಮೇ 13: 2023 ನೇ ಸಾಲಿನ ಮುಂಗಾರು ಹಂಗಾಮಿನ ಮಳೆ ಕೊರತೆ ಕಂಡು ಬಂದ ಹಿನ್ನೆಲೆ, ಜಿಲ್ಲೆಯ ಕಾರ್ಕಳ, ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರವು ಘೋಷಿಸಿರುತ್ತದೆ. ಜಿಲ್ಲೆಯ ಬರಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ಬೆಳೆಹಾನಿ ಪರಿಹಾರ ಮೊತ್ತವನ್ನು ಸರ್ಕಾರದಿಂದ ಡಿ.ಬಿ.ಟಿ ಮೂಲಕ ವಿತರಿಸಲಾಗುತ್ತಿದ್ದು, ಜಿಲ್ಲೆಯ ಒಟ್ಟು 26,454 ಫಲಾನುಭವಿ ರೈತರುಗಳಿಗೆ ಒಟ್ಟು 4,86,78,384 ರೂ. ಗಳನ್ನು ಪಾವತಿಸಲಾಗಿರುತ್ತದೆ. ಬರಪರಿಸ್ಥಿತಿ ಹಿನ್ನೆಲೆ, ರೈತರಿಗೆ ಬೆಳೆ ಹಾನಿ ಪರಿಹಾರ ಪಾವತಿ ಸಂಬಂಧ ಮಾಹಿತಿಯನ್ನು ಪಡೆದುಕೊಳ್ಳಲು ರೈತರುಗಳಿಗೆ ಅನುಕೂಲವಾಗುವಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಈ ಕೆಳಕಂಡಂತೆ ಸಹಾಯವಾಣಿಗಳನ್ನು ತೆರೆಯಲಾಗಿರುತ್ತದೆ.
ಉಡುಪಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯವಾಣಿ ಸಂಖ್ಯೆ: ಟೋಲ್ ಫ್ರೀ ನಂಬರ್ 1077, 0820-2574802, ಕುಂದಾಪುರ ಉಪವಿಭಾಗಾಧಿಕಾರಿಗಳ ಕಚೇರಿಯ ಸಹಾಯವಾಣಿ ಸಂಖ್ಯೆ : 08254-200816, ಕಾರ್ಕಳ ತಾಲೂಕು ತಹಶೀಲ್ದಾರರ ಕಚೇರಿಯ ಸಹಾಯವಾಣಿ ಸಂಖ್ಯೆ: 08258-230201, ಹೆಬ್ರಿ ತಾಲೂಕು ತಹಶೀಲ್ದಾರರ ಕಚೇರಿಯ ಸಹಾಯವಾಣಿ ಸಂಖ್ಯೆ: 08253-2550201 ಹಾಗೂ ಬ್ರಹ್ಮಾವರ ತಾಲೂಕು ತಹಶೀಲ್ದಾರರ ಕಚೇರಿಯ ಸಹಾಯವಾಣಿ ಸಂಖ್ಯೆ: 0820-2560494 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.