ಉಡುಪಿ: ಕುಷ್ಠರೋಗ ಮತ್ತು ಕ್ಷಯರೋಗ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕಾದ ಅಗತ್ಯವಿದೆ ಎಂದು ಹೊಡೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರಿಮಾ ತಿಳಿಸಿದರು. ಅವರು ಇಂದು ಹೊಡೆ ಸಾಲಿಯತ್ ಶಿಕ್ಷಣ ಸಂಸ್ಥೆಯಲ್ಲಿ ಆರೋಗ್ಯ ಇಲಾಖೆ ಮತ್ತು ಜೇಸಿಐ ಉಡುಪಿ ಸಿಟಿ ವತಿಯಿಂದ ನಡೆದ ಕುಷ್ಠರೋಗ ನಿವಾರಣಾ ಕಾರ್ಯಾಗಾರದಲ್ಲಿ ಮಾತನಾಡಿದರು.
ನಮ್ಮ ಮೈಮೇಲೆ ಯಾವುದೇ ರೀತಿಯ ಚರ್ಮ ರೋಗದ ಚಿಹ್ನೆಗಳು ಕುಷ್ಠರೋಗಕ್ಕೆ ಎಡೆಮಾಡಬಹುದು. ಹೀಗಾಗಿ ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿ ಅಧ್ಯಕ್ಷ ವೈದ್ಯರಾದ ಡಾ. ವಿಜಯ್ ನೆಗಳೂರು ವಹಿಸಿ ಶುಭಹಾರೈಸಿದರು.
ವೇದಿಕೆಯಲ್ಲಿ ವಲಯ ನಿರ್ದೇಶಕ ರಾಘವೇಂದ್ರ ಪ್ರಭು ಕರ್ವಾಲು, ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಾಂ ಸಾಲಿಕೇರಿ, ಪ್ರಾಂಶುಪಾಲರಾದ ದಿವ್ಯ ಪೈ, ಡಾ.ಚಿತ್ರಾ ನೆಗಳೂರು ಮುಂತಾದವರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ವಿಚಾರ ವಿನಿಮಯ ನಡೆಯಿತು.