ಉಡುಪಿ, ಮೇ 14: ಮುಂಬರುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷಕ್ಕೆ ಗೆಲ್ಲುವ ಪೂರಕ ವಾತಾವರಣವಿದ್ದು, ಎರಡೂ ಕ್ಷೇತ್ರಗಳಲ್ಲೂ ಗೆಲ್ಲಲು ಪಕ್ಷ ರಣತಂತ್ರವನ್ನು ರೂಪಿಸಲಾಗಿದೆ. ಜವಾಬ್ದಾರಿಯನ್ನು ಪಡೆದ ಮುಖಂಡರು ಮತದಾರರನ್ನು ವೈಯಕ್ತಿಕವಾಗಿ ತಲುಪುವ ಪ್ರಯತ್ನ ಮಾಡಬೇಕು. ಇದರಿಂದ ಫಲಿತಾಂಶ ನಮ್ಮ ಪರವಾಗಿ ಬರುವುದರಲ್ಲಿ ಸಂಶಯವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಹಾಗೆಯೇ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವಿರತವಾಗಿ ಪಕ್ಷದ ಗೆಲುವಿಗಾಗಿ ದುಡಿದಿರುವ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದವನ್ನು ಅರ್ಪಿಸಿದರು. ಅವರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ಮುಖಂಡರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಗಳಾದ ಅಯನೂರು ಮಂಜುನಾಥ ಮಾತನಾಡಿ, ಬಿಜೆಪಿಯಿಂದ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಕೊಡುಗೆ ಶೂನ್ಯ, ಉಡುಪಿ ಜಿಲ್ಲೆಯಲ್ಲಿ 14 ಸಾವಿರ ಮತಗಳಿವೆ. ಈ ನಿಟ್ಟಿನಲ್ಲಿ ಜಿಲ್ಲೆಯ ಕಾರ್ಯಕರ್ತರ ನಾಯಕರ ಸಂಪೂರ್ಣ ಸಹಕಾರ ಅಗತ್ಯ. ಅಂಚೆ ಹಾಗೂ ಸಾಮಾಜಿಕ ಜಾಲತಾಣಗಳ ಮುಖಾಂತರ ಮತದಾರರನ್ನು ತಲುಪುವ ಉದ್ದೇಶ ಹೊಂದಿದ್ದೇನೆ. ಪ್ರಜ್ಞಾವಂತ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದರೆ ಬದಲಾವಣೆ ಸಾಧ್ಯ ಎಂದರು. ಲೋಕಸಭಾ ಚುನಾವಣೆಯ ಪಕ್ಷದ ಅಭ್ಯರ್ಥಿಗಳಾದ ಕೆ.ಜಯಪ್ರಕಾಶ್ ಹೆಗ್ಡೆಯವರ ಚುನಾವಣಾ ಏಜೆಂಟ್ ಗಳಾಗಿ ಕಾರ್ಯನಿರ್ವಹಿಸಿದ್ದ ನ್ಯಾಯವಾದಿಗಳಾದ ವಿಜಯ ಹೆಗ್ಡೆಯವರು ಮಾತನಾಡಿ ಮುಂದಿನ ಮತ ಎಣಿಕೆಯ ಮಾಹಿತಿ ನೀಡಿದರು. ಇತ್ತೀಚೆಗೆ ಅಗಲಿದ ಶ್ರೀನಿವಾಸ ಪ್ರಸಾದ್, ವಸಂತ ಬಂಗೇರ ಹಾಗೂ ಇತರರಿಗೆ ನುಡಿ ನಮನ ಸಲ್ಲಿಸಲಾಯಿತು.
ಎಮ್. ಎ.ಗಫೂರ್, ಕಿಶನ್ ಹೆಗ್ದೆ ಕೊಳ್ಕೆಬೈಲ್, ವಿಜಯ ಹೆಗ್ಡೆ, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮುಳವಳ್ಳಿ, ಮಲ್ಯಾಡಿ ಶಿವರಾಂ ಶೆಟ್ಟಿ, ನೀರೆ ಕ್ರೆಷ್ಣ ಶೆಟ್ಟಿ, ಹರೀಶ್ ಕಿಣಿ, ಬಿ ನರಸಿಂಹಮೂರ್ತಿ, ದಿನಕರ ಹೇರೂರು ರಮೇಶ್ ಕಾಂಚನ್, ಹರಿಪ್ರಸಾದ್ ಶೆಟ್ಟಿ, ಸದಾಶಿವ ದೇವಾಡಿಗ, ನವೀನಚಂದ್ರ ಸುವರ್ಣ, ಸಂತೋಷ್ ಕುಲಾಲ್, ಪ್ರದೀಪ್ ಶೆಟ್ಟಿ, ನವೀನಚಂದ್ರ ಶೆಟ್ಟಿ, ಸರ್ಪುದ್ದೀನ್ ಶೇಖ್, ಜಯಕುಮಾರ್, ಶಬ್ಬಿರ್ ಆಹ್ಮದ್, ಮಹಾಬಲ ಕುಂದರ್, ರೋಶನ್ ಶೆಟ್ಟಿ, ಶಶಿಧರ ಶೆಟ್ಟಿ, ಎಲ್ಲೂರು ಪ್ರಖ್ಯಾತ ಶೆಟ್ಟಿ, ವೈ. ಸುಕುಮಾರ್, ಜ್ಯೋತಿ ಹೆಬ್ಬಾರ್, ಮೀನಾಕ್ಷಿ ಮಾಧವ ಬನ್ನಂಜೆ, ರೋಷನ್ ಒಲಿವರಾ, ಕಿರಣ್ ಹೆಗ್ಡೆ, ಸೌರಭ್ ಬಲ್ಲಾಳ್, ಕಿಶೋರ್ ಕುಮಾರ್ ಎರ್ಮಾಳ್, ಇಸ್ಮಾಯಿಲ್ ಅತ್ರಾಡಿ, ಉದ್ಯಾವರ ನಾಗೇಶ್ ಕುಮಾರ್, ಬಾಲಕೃಷ್ಣ ಪೂಜಾರಿ, ವಹಿದ್, ಲೂಯಿಸ್ ಲೊಬೋ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಕುಶಲ್ ಶೆಟ್ಟಿ ಸ್ವಾಗತಿಸಿ ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ವಂದಿಸಿದರು.