ಕುಂದಾಪುರ, ಮೇ 10: ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಂಶೋಧನಾ ಪ್ರಯೋಗಾಲಯವನ್ನು ಸ್ಥಾಪಕರ ದಿನದಂದು ಕರ್ನಾಟಕ ಸರಕಾರದ ತೋಟಗಾರಿಕಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಜಯಶೀಲ ಶೆಟ್ಟಿ ಉದ್ಘಾಟಿಸಿದರು. ಕಾಲೇಜಿನ ಅಧ್ಯಕ್ಷರಾದ ಬಿ.ಎಮ್. ಸುಕುಮಾರ್ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ನಾರಾಯಣ ನಾಯಕ್, ಜ್ಞಾನಸುಧಾ ಸಂಸ್ಥೆಯ ಸಂಸ್ಥಾಪಕರಾದ ಸುಧಾಕರ್ ಶೆಟ್ಟಿ, ಪ್ರಾಂಶುಪಾಲ ಪ್ರೊ ಕೆ. ಉಮೇಶ್ ಶೆಟ್ಟಿ, ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಹಾಗೂ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನೂತನ ಪ್ರಯೋಗಾಲಯವು ಹೊಸ ತಂತ್ರಜ್ಷಾನವನ್ನು ಒಳಗೊಂಡ 66 ಗಣಕ ಯಂತ್ರಗಳನ್ನು ಒಳಗೊಂಡಿದೆ.
ಬಿ. ಬಿ. ಹೆಗ್ಡೆ ಕಾಲೇಜು: ನೂತನ ಸಂಶೋಧನಾ ಪ್ರಯೋಗಾಲಯ ಉದ್ಘಾಟನೆ

ಬಿ. ಬಿ. ಹೆಗ್ಡೆ ಕಾಲೇಜು: ನೂತನ ಸಂಶೋಧನಾ ಪ್ರಯೋಗಾಲಯ ಉದ್ಘಾಟನೆ
Date: