ಕೋಟ, ಮೇ 16: ವಿದ್ಯಾರ್ಥಿಗಳು ರಜಾ ದಿನಗಳಲ್ಲಿ ಮೋಜು ಮಸ್ತಿಗೆ ಸಮಯ ಮೀಸಲಿಡದೆ, ಬೇಸಿಗೆ ಶಿಬಿರದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಹಲವಾರು ವಿಷಯಗಳ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ. ಮಕ್ಕಳಲ್ಲೂ ಕನಸು ಕಾಣುವ ತುಡಿತವಿರುತ್ತದೆ, ಆ ಕನಸಿಗೆ ಬಣ್ಣ ತುಂಬುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲ ಸೋಮಶೇಖರ್ ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗಾಗಿ ಮೂರು ದಿನಗಳ ಆರ್ಟ್ ಕ್ಯಾಂಪ್ ಆರಾಧನಾ-2024 (ಬೆರಳುಗಳಲ್ಲಿ ಭಾವಗೀತೆ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ಕಾರಂತ ಥೀಮ್ ಪಾರ್ಕ್ನಲ್ಲಿ ಮಕ್ಕಳಿಗಾಗಿ ಹಲವಾರು ಚಟುವಟಿಕೆ, ತರಬೇತಿ ನಡೆಯುತ್ತಿರುತ್ತದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಿ ಎಂದರು. ಕೋಟತಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್, ಚಿತ್ರಕಲಾ ಶಿಕ್ಷಕಿ ಐಶ್ವರ್ಯ ಉಪಸ್ಥಿತರಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ನಕ್ಷತ್ರ ವಂದಿಸಿದರು.
ಮಕ್ಕಳ ಕನಸುಗಳಿಗೆ ಬಣ್ಣ ತುಂಬುವ ಕೆಲಸವಾಗಲಿ: ಸುಶೀಲ ಸೋಮಶೇಖರ್

ಮಕ್ಕಳ ಕನಸುಗಳಿಗೆ ಬಣ್ಣ ತುಂಬುವ ಕೆಲಸವಾಗಲಿ: ಸುಶೀಲ ಸೋಮಶೇಖರ್
Date: