Monday, January 20, 2025
Monday, January 20, 2025

ವಿಶೇಷಚೇತನರ ಬದುಕಿಗೆ ಪೂರಕವಾಗುವ ವ್ಯವಸ್ಥೆ ಕಲ್ಪಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ವಿಶೇಷಚೇತನರ ಬದುಕಿಗೆ ಪೂರಕವಾಗುವ ವ್ಯವಸ್ಥೆ ಕಲ್ಪಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

ಉಡುಪಿ, ಮೇ 16: ವಿಶೇಷಚೇತನರು ಅಂಗವೈಕಲ್ಯತೆಯನ್ನು ಮರೆತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡುತ್ತಿದ್ದು, ಅವರ ಬದುಕಿಗೆ ಪೂರಕವಾಗುವ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಇಡೀ ಸಮಾಜ ಅವರ ಜೊತೆಗೂಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್ ಕ್ರಾಸ್‌ಸಂಸ್ಥೆ ಉಡುಪಿ ಜಿಲ್ಲೆ ಮತ್ತು ಎಪಿಡಿ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ವಿಶ್ವ ಸುಲಭ ಲಭ್ಯತಾ ಅರಿವು ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವಿಶೇಷಚೇತನರ ಶ್ರೇಯೋಭಿವೃದ್ಧಿಗೆ ಸರಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಅದರ ಸದುಪಯೋಗ ಪಡೆದುಕೊಂಡು ಉತ್ತಮ ಜೀವನವನ್ನು ನಡೆಸಬೇಕು. ಕಟ್ಟಡಗಳು ಅಥವಾ ಕಚೇರಿಗಳಿಗೆ ಭೇಟಿ ನೀಡುವ ವಿಕಲಚೇತನರಿಗೆ ಅಗತ್ಯವಿರುವ ಶೌಚಾಲಯ, ರ‍್ಯಾಂಪ್ ವ್ಯವಸ್ಥೆ, ವ್ಹೀಲ್ ಚೇರ್, ಸೌಲಭ್ಯವನ್ನು ಒದಗಿಸುವ ಮೂಲಕ ಮುಕ್ತವಾಗಿ ಸಂಚಾರ ನಡೆಸಲು ಅನುಕೂಲ ಮಾಡಿಕೊಡಬೇಕು ಎಂದರು. ವಿಶೇಷಚೇತನರು ಎಂದು ಅನುಕಂಪ ತೋರದೇ ಆತ್ಮವಿಶ್ವಾಸದಿಂದ ಮುನ್ನುಗ್ಗಲು ಅವರಗಳಿಗೆ ದಾರಿ ಮಾಡಿಕೊಡಬೇಕು. ರೆಡ್‌ಕ್ರಾಸ್ ಸೇರಿದಂತೆ ಅನೇಕ ಸಂಘ-ಸಂಸ್ಥೆಗಳು ವಿಕಲಚೇತನರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವುಗಳನ್ನು ಗುರುತಿಸುವ ಮೂಲಕ ಮುಂದಿನ ದಿನಗಳಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ಹೆಚ್ಚು ಕೆಲಸ ಮಾಡಲು ಪ್ರೇರಣೆ ನೀಡಬೇಕು ಎಂದರು. ಸರ್ಕಾರವು ವಿಶೇಷ ಚೇತನರ ಕಲ್ಯಾಣಕ್ಕಾಗಿ ನೀಡುವ ಅನುದಾನವನ್ನು ಶೇ 5 ರಷ್ಟು ಹೆಚ್ಚಿಸಿದ್ದು, ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಕ್ರಿಯಾಯೋಜನೆ ರೂಪಿಸಿವಾಗ ಅದರಲ್ಲಿ ಶೇ 5 ರಷ್ಟು ಅನುದಾನವನ್ನು ಮೀಸಲಿರಿಸಿ ವಿಕಲಚೇತನರ ಕಲ್ಯಾಣಕ್ಕಾಗಿ ಅವರಿಗೆ ಅಗತ್ಯವಿರುವ ವಿವಿಧ ಸವಲತ್ತು ಮತ್ತು ಸಲಕರಣೆಗಳನ್ನು ಒದಗಿಸಲಾಗುವುದು. ವಿಶೇಷ ಚೇತನರು ಇದರ ಪ್ರಯೋಜನೆಯನ್ನು ಪಡೆಯಬೇಕೆಂದರು.

ರೆಡ್‌ಕ್ರಾಸ್ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ – 2016 ರ ಸೆಕ್ಷನ್ 40-46 ರ ಪ್ರಕಾರ ಎಲ್ಲಾ ಸಾರ್ವಜನಿಕ ಕಟ್ಟಡಗಳು ವಿಕಲಚೇತನ ವ್ಯಕ್ತಿಗಳಿಗೆ ಮುಕ್ತ ವಾತಾವರಣ ಹಾಗೂ ಎಲ್ಲಾ ಕಟ್ಟಡಗಳಲ್ಲಿ ಸುಲಭವಾಗಿ ಓಡಾಡಲು ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಬೇಕಾಗಿರುತ್ತದೆ. ಅದರಂತೆ ಅಂಗವಿಕಲರು ಸಮಾಜದಲ್ಲಿ ಸಂಪೂರ್ಣವಾಗಿ ಹಾಗೂ ಸಕ್ರಿಯವಾಗಿ ಭಾಗವಹಿಸಲು ಸುಲಭ ಲಭ್ಯತೆಯ ಕುರಿತಂತೆ ಪೂರಕವಾದ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಸುಲಭ ಲಭ್ಯತೆಯ ವಿಶ್ವ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ ಭಟ್ ಎಂ. ವಿಕಲಚೇತನ ಹಾಗು ಹಿರಿಯ ನಾಗರಿಕರ ಸೌಲಭ್ಯಗಳ ಬಗ್ಗೆ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ., ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರತ್ನಾ, ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ, ಎ.ಪಿ.ಡಿ ಸಂಸ್ಥೆಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಹರೀಶ್ ಶೆಟ್ಟಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕರ್ವಾಲ್ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!