Monday, January 20, 2025
Monday, January 20, 2025

ವಿಧಾನ ಪರಿಷತ್ ಚುನಾವಣೆ: ಮತದಾನ ಕೇಂದ್ರಗಳ ವಿವರ

ವಿಧಾನ ಪರಿಷತ್ ಚುನಾವಣೆ: ಮತದಾನ ಕೇಂದ್ರಗಳ ವಿವರ

Date:

ಉಡುಪಿ, ಮೇ 17: ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ಭಾರತ ಚುನಾವಣಾ ಆಯೋಗವು ಮತದಾನ ಕೇಂದ್ರಗಳ ಪಟ್ಟಿಯನ್ನು ಅನುಮೋದಿಸಿದ್ದು, ಉಡುಪಿ ಜಿಲ್ಲೆಗೆ ಸಂಬಂಧಿಸಿದ ನೈರುತ್ಯ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಮತದಾನ ಕೇಂದ್ರಗಳ ವಿವರವು ಈ ಕೆಳಗಿನಂತಿದೆ. ಬೈಂದೂರು ತಾಲೂಕಿಗೆ ಸಂಬಂಧಿಸಿದಂತೆ ನೈರುತ್ಯ ಪದವೀಧರರರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 67 ರ ಬೈಂದೂರಿನ ಸರಕಾರಿ ಪದವಿಪೂರ್ವ ಕಾಲೇಜು (ಮಧ್ಯಭಾಗ) ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಬೈಂದೂರಿನ ಸರಕಾರಿ ಪದವಿಪೂರ್ವ ಕಾಲೇಜು (ಉತ್ತರ ಭಾಗ), ಕುಂದಾಪುರ ತಾಲೂಕಿಗೆ ಸಂಬಂಧಿಸಿದಂತೆ ಮತದಾನ ಕೇಂದ್ರ ಸಂಖ್ಯೆ 68 ರ ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು (ಪೂರ್ವ ಭಾಗ), 69 ರ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು (ಉತ್ತರ ಭಾಗ) ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 68 ರ ಶಂಕರನಾರಾಯಣ ಸರಕಾರಿ ಪದವಿಪೂರ್ವ ಕಾಲೇಜು (ಪಶ್ಚಿಮ ಭಾಗ) ಮತ್ತು 69 ರ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜು (ದಕ್ಷಿಣ ಭಾಗ) ಇಲ್ಲಿ ಮತದಾನ ನಡೆಯಲಿದೆ.

ಬ್ರಹ್ಮಾವರ ತಾಲೂಕಿಗೆ ಸಂಬಂಧಿಸಿದಂತೆ ನೈರುತ್ಯ ಪದವೀಧರರರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 70 ರ ಬ್ರಹ್ಮಾವರದ ಸರಕಾರಿ ಪದವಿಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ-1, 70(ಎ) ಯ ಬ್ರಹ್ಮಾವರದ ಸರಕಾರಿ ಪದವಿಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ-2, 70 (ಬಿ) ಯ ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ -3 ರಲ್ಲಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 70 ರ ಬ್ರಹ್ಮಾವರದ ಸರಕಾರಿ ಪದವಿಪೂರ್ವ ಕಾಲೇಜು (ಪಶ್ಚಿಮ ಭಾಗ), ಉಡುಪಿ ತಾಲೂಕಿಗೆ ಸಂಬಂಧಿಸಿದಂತೆ ಮತದಾನ ಕೇಂದ್ರ 71 ರ ಮಣಿಪಾಲ ಜ್ಯೂನಿಯರ್ ಕಾಲೇಜಿನ (ಎಂ.ಜೆ.ಸಿ) ಕೊಠಡಿ ಸಂಖ್ಯೆ-1, 71 (ಎ) ಯ ಮಣಿಪಾಲ ಜ್ಯೂನಿಯರ್ ಕಾಲೇಜಿನ (ಎಂ.ಜೆ.ಸಿ) ಕೊಠಡಿ ಸಂಖ್ಯೆ -2, 71 (ಬಿ) ಯ ಮಣಿಪಾಲ
ಜ್ಯೂನಿಯರ್ ಕಾಲೇಜಿನ (ಎಂ.ಜೆ.ಸಿ) ಕೊಠಡಿ ಸಂಖ್ಯೆ-3, 72 ರ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್‌ನ ಕೊಠಡಿ ಸಂಖ್ಯೆ- 1, 72 (ಎ) ಯ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್‌ನ ಕೊಠಡಿ ಸಂಖ್ಯೆ-2, 72 (ಬಿ) ಯ ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್‌ನ ಕೊಠಡಿ ಸಂಖ್ಯೆ-3 ಮತ್ತು 72 (ಸಿ) ಯ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್‌ನ ಕೊಠಡಿ ಸಂಖ್ಯೆ -4 ರಲ್ಲಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಕೇಂದ್ರ 71 ರ ಮಣಿಪಾಲ ಜ್ಯೂನಿಯರ್ ಕಾಲೇಜಿನ (ಪಶ್ಚಿಮ ಭಾಗ) ಮತ್ತು 72 ರ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಬೋರ್ಡ್ ಹೈಸ್ಕೂಲ್ ಅನ್ನು ಮತದಾನ ಕೇಂದ್ರಗಳಾಗಿ ಗುರುತಿಸಲಾಗಿರುತ್ತದೆ.

ಕಾಪು ತಾಲೂಕಿಗೆ ಸಂಬಂಧಿಸಿದಂತೆ ನೈರುತ್ಯ ಪದವೀಧರರರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 73 ರ ಕಾಪುವಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಸಂಖ್ಯೆ-1 ಮತ್ತು 73 (ಎ) ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಸಂಖ್ಯೆ -3 ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 73 ರ ಕಾಪುವಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಸಂಖ್ಯೆ-2, ಕಾರ್ಕಳ ತಾಲೂಕಿಗೆ ಸಂಬಂಧಿಸಿದಂತೆ ನೈರುತ್ಯ ಪದವೀಧರರರ ಕ್ಷೇತ್ರಕ್ಕೆ ಅಜೆಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಪಶ್ಚಿಮ ಭಾಗ), 75 ರ ಕಾರ್ಕಳ ಸರಕಾರಿ ಪದವಿಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ-1 ಮತ್ತು 75 (ಎ) ಯ ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ-2 ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 74 ರ ಅಜೆಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಪೂರ್ವ ಭಾಗ) ಮತ್ತು 75 ರ ಕಾರ್ಕಳ ಸರಕಾರಿ ಪದವಿಪೂರ್ವ ಕಾಲೇಜು (ದಕ್ಷಿಣ ಭಾಗ), ಹೆಬ್ರಿ ತಾಲೂಕಿಗೆ ಸಂಬಂಧಿಸಿದಂತೆ ನೈರುತ್ಯ ಪದವೀಧರರರ ಕ್ಷೇತ್ರಕ್ಕೆ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 76 ರ ಹೆಬ್ರಿ ತಾಲೂಕು ಆಡಳಿತ ಸೌಧದಲ್ಲಿ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!