Sunday, September 8, 2024
Sunday, September 8, 2024

ಮತ ಎಣಿಕೆ: ಮಾಹಿತಿ ಪಡೆಯಲು, ದೂರು ದಾಖಲಿಸಲು ವಿಶೇಷ ನಿಯಂತ್ರಣ ಕೊಠಡಿ ಸ್ಥಾಪನೆ

ಮತ ಎಣಿಕೆ: ಮಾಹಿತಿ ಪಡೆಯಲು, ದೂರು ದಾಖಲಿಸಲು ವಿಶೇಷ ನಿಯಂತ್ರಣ ಕೊಠಡಿ ಸ್ಥಾಪನೆ

Date:

ಉಡುಪಿ, ಮೇ 18: 15-ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆ ಪ್ರಕ್ರಿಯೆಯು ಜೂನ್ 4 ರಂದು ಬೆಳಿಗ್ಗೆ 8 ಗಂಟೆಯಿಂದ ನಗರದ ಬ್ರಹ್ಮಗಿರಿಯ ಸೈಂಟ್ ಸಿಸಿಲಿ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ. ಮತ ಎಣಿಕೆ ಕೇಂದ್ರಕ್ಕೆ ಭಾರತ ಚುನಾವಣಾ ಆಯೋಗದಿಂದ ನಿಯೋಜನೆಗೊಂಡ ಚುನಾವಣಾ ವೀಕ್ಷಕರು, ಚುನಾವಣಾಧಿಕಾರಿಗಳು, ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ/ಸಿಬ್ಬಂದಿ, ಸ್ಪರ್ಧಿಸಿದ ಅಭ್ಯರ್ಥಿಗಳು ಅಥವಾ ಅವರ ಚುನಾವಣಾ ಏಜೆಂಟ್ ಮತ್ತು ಮತ ಎಣಿಕೆ ಏಜೆಂಟ್, ಭಾರತ ಚುನಾವಣಾ ಆಯೋಗದ ಅಧಿಕೃತ ಪರವಾನಿಗೆ ಪಡೆದ ಮಾಧ್ಯಮದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿಯಿರುತ್ತದೆ.

ಮತ ಎಣಿಕೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಮತ್ತು ದೂರು ದಾಖಲಿಸಲು #102, ಎ ಬ್ಲಾಕ್, ಜಿಲ್ಲಾಧಿಕಾರಿಯವರ ಕಛೇರಿ, ರಜತಾದ್ರಿ, ಮಣಿಪಾಲ, ಸಹಾಯವಾಣಿ: 1950, ದೂ. ಸಂಖ್ಯೆ: 0820-2574802 ವಿಶೇಷ ನಿಯಂತ್ರಣ ಕೊಠಡಿಯನ್ನು ಮತ ಎಣಿಕೆ ಆರಂಭಗೊಳ್ಳುವ 72 ಗಂಟೆ ಪೂರ್ವದಲ್ಲಿ ತೆರೆಯಲಾಗುತ್ತಿದ್ದು, ಸಾರ್ವಜನಿಕರು ದೂರವಾಣಿ ಮೂಲಕ ಅಥವಾ ನೇರವಾಗಿ ಆಗಮಿಸಿ ಮತ ಎಣಿಕೆಗೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ ಅಥವಾ ದೂರನ್ನು ದಾಖಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಕ್ಕೆ ಶಿಕ್ಷಕರ ಸೇವೆ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಸೆ.7: ಶಿಕ್ಷಕರು ರಾಷ್ಟ್ರಕ್ಕೆ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಇಂದಿನ...

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್...

18ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ

ಬೆಳ್ಮಣ್, ಸೆ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಮದ್ಯ ಮಾರಾಟ ನಿಷೇಧ

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ...
error: Content is protected !!