Sunday, August 30, 2026
Sunday, August 30, 2026

ಮಣಿಪಾಲ- ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಸಹಾಯಹಸ್ತ ನೀಡುವ ಪ್ರತಿಷ್ಠಾನಗಳಿಗೆ ಸನ್ಮಾನ

ಮಣಿಪಾಲ- ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಸಹಾಯಹಸ್ತ ನೀಡುವ ಪ್ರತಿಷ್ಠಾನಗಳಿಗೆ ಸನ್ಮಾನ

Date:

ಮಣಿಪಾಲ: ಸರಿಯಾದ ಸಮಯದಲ್ಲಿ ಸರಿಯಾದ ತಂಡದಿಂದ ಸರಿಯಾದ ಚಿಕಿತ್ಸೆ ನೀಡಿದರೆ ಬಾಲ್ಯದ ಕ್ಯಾನ್ಸರ್ ಕಾಯಿಲೆಯು ಹೆಚ್ಚು ಗುಣಪಡಿಸಲ್ಪಡುತ್ತವೆ. ಚಿಕಿತ್ಸೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಲು, ಅರ್ಜುನ್ ಭಂಡಾರ್ಕರ್ ಸ್ಥಾಪಿಸಿದ ಸೇವ್ ಲೈಫ್ ಚಾರಿಟಬಲ್ ಟ್ರಸ್ಟ್ ಮತ್ತು ಅಮಿತಾ ಪೈ ಸ್ಥಾಪಿಸಿದ ಒನ್ ಗುಡ್ ಸ್ಟೆಪ್ ಫೌಂಡೇಶನ್ ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗಕ್ಕೆ ಬರುವ ಮಕ್ಕಳಿಗೆ ಹಣಕಾಸಿನ ನೆರವು ನೀಡಲು ಪಟ್ಟುಬಿಡದೆ ಕೆಲಸ ಮಾಡುತ್ತಿದೆ.

ಅವರ ನಿಸ್ವಾರ್ಥ ಸೇವೆ ಮತ್ತು ಪ್ರಯತ್ನಗಳನ್ನು ಶ್ಲಾಘಿಸಲು ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನದ ಆಚರಣೆಯ ಸಂದರ್ಭದಲ್ಲಿ ಇವರಿಬ್ಬರನ್ನು ಸನ್ಮಾನಿಸಲಾಯಿತು.

ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ಮುಖ್ಯಸ್ಥರಾದ ಡಾ. ವಾಸುದೇವ ಭಟ್ ಕೆ ಮಾತನಾಡುತ್ತಾ, ಕ್ಯಾನ್ಸರ್ ಹೊಂದಿರುವ ಮಕ್ಕಳಲ್ಲಿ ಸಮಗ್ರ ಚಿಕಿತ್ಸಾ ವಿಧಾನದೊಂದಿಗೆ ಗರಿಷ್ಠ ಯಶಸ್ಸು ಸಾಧಿಸಲು ಬಹಳಷ್ಟು ಸಮಾನಮನಸ್ಕರು ಒಟ್ಟಿಗೆ ಕೆಲಸ ಮಾಡಬೇಕು. ಇದರಲ್ಲಿ ಸರ್ಕಾರೇತರ ಸೇವಾ ಸಂಸ್ಥೆಗಳ ಪಾಲು ದೊಡ್ಡದಿದೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಕೆಎಂಸಿ ಡೀನ್ ಡಾ.ಶರತ್ ಕುಮಾರ್ ರಾವ್ ಅವರು, ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಸಮಗ್ರ ಚಿಕಿತ್ಸೆ ನೀಡುವ ಕೆಲವೇ ಕೇಂದ್ರಗಳು ಭಾರತದಲ್ಲಿದ್ದು, ಅದರಲ್ಲಿ ಮಣಿಪಾಲವು ಒಂದಾಗಿದೆ ಎಂದರು.  

ಕ್ಯಾನ್ಸರ್ ಪೀಡಿತರಿಗೆ ಮತ್ತು ಅವರ ಆರೈಕೆದಾರರಿಗೆ ಯಾವುದೇ ಶುಲ್ಕವಿಲ್ಲದೆ ವಸತಿ ಸೌಲಭ್ಯ ನೀಡುವ ಮುಂಬರುವ ಯೋಜನೆ ಬಗ್ಗೆ ಅವರು ಮಾತನಾಡಿದರು.

ಸನ್ಮಾನ ಕಾರ್ಯಕ್ರಮದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ ಶೆಟ್ಟಿ ಮತ್ತು ನರ್ಸಿಂಗ್ ಸೇವೆಗಳ ಮಖ್ಯಸ್ಥರಾದ ಡಾ.ಪಿ.ಸುಬಾ ಸೂರಿಯಾ ಉಪಸ್ಥಿತರಿದ್ದು, ಈ ಎರಡು ಪ್ರತಿಷ್ಠಾನಗಳ ಪ್ರಯತ್ನವನ್ನು ಶ್ಲಾಘಿಸಿದರು.

ಸನ್ಮಾನದ ನಂತರ ನಡೆದ ಮನರಂಜನಾ ಕಾರ್ಯಕ್ರಮದಲ್ಲಿ ಚಿತ್ರಕಲೆ ಸ್ಪರ್ಧೆ, ಮಕ್ಕಳು ಮತ್ತು ಅವರ ಆರೈಕೆ ಮಾಡುವವರಿಗೆ ರೀಲ್ಸ್ ಸ್ಪರ್ಧೆ ಮತ್ತು ದಾದಿಯರಿಗೆ ಪೋಸ್ಟರ್ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ಸಹಾಯಕ ಪ್ರಾಧ್ಯಾಪಕರುಗಳಾದ ಡಾ. ಅರ್ಚನಾ ಎಂ ವಿ ಸ್ವಾಗತಿಸಿ, ಡಾ ವಿನಯ್ ಎಂ ವಿ  ಅತಿಥಿಗಳನ್ನು ಪರಿಚಯಿಸಿದರು. ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿಯ ಫೆಲೋ ಡಾ. ಚಂದನಾ ಪೈ ಕಾರ್ಯಕ್ರಮ ನಿರೂಪಿಸಿದರು. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!