ಉಡುಪಿ, ಮೇ 22: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರಕೂರು ಇಲ್ಲಿಯ ಗಣಕವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಗಂಗಾಧರಯ್ಯ ಎಸ್ ಅವರು ಲೋಕೇಶ್ ಬಿ. ಭಜಂತ್ರಿ ಅವರ ಮಾರ್ಗದರ್ಶನದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ರಿಸೋರ್ಸ್ ಮ್ಯಾನೇಜ್ಮೆಂಟ್ ಆ್ಯಂಡ್ ಸೆಕ್ಯೂರ್ ರೂಟಿಂಗ್ ಇನ್ ಇಂಟರ್ನೆಟ್ ಆಫ್ ಥಿಂಗ್ಸ್ ಮಹಾಪ್ರಬಂಧಕ್ಕೆ ಪಿ.ಎಚ್.ಡಿ ಪ್ರದಾನ ಮಾಡಲಾಗಿದೆ. ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರಕೂರು ಪ್ರಾಂಶುಪಾಲರಾದ ಡಾ. ರಮೇಶ್ ಆಚಾರ್ ಮತ್ತು ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಗಂಗಾಧರಯ್ಯ ಎಸ್ ಅವರಿಗೆ ಪಿ.ಎಚ್.ಡಿ

ಗಂಗಾಧರಯ್ಯ ಎಸ್ ಅವರಿಗೆ ಪಿ.ಎಚ್.ಡಿ
Date: