ಉಡುಪಿ, ಮೇ 22: ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಹಾಗೂ ಯೂತ್ ರೆಡ್ ಕ್ರಾಸ್ ವಿಭಾಗ ಮತ್ತು ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ ಇವರ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ‘ಉಷ್ಣ ಸಂಬಂಧಿ ಕಾಯಿಲೆ-ತಡೆಗಟ್ಟುವಿಕೆ ಮತ್ತು ನಿರ್ವಹಣೆ’ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅಖಿಲಾ ಡಿ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಡಾ.ರಾಮು ಎಲ್ ಹಾಗೂ ವೈಆರ್‌ಸಿಯ ಕಾರ್ಯಕ್ರಮಾಧಿಕಾರಿ ಡಾ.ರಂಗಸ್ವಾಮಿ ಜೆ ಅವರ ಮಾರ್ಗದರ್ಶನದಲ್ಲಿ ವೈಆರ್‌ಸಿಯ ಸಹಾಯಕ ಕಾರ್ಯಕ್ರಮಾಧಿಕಾರಿಗಳಾದ ಅನುಷಾ ಕೆ. ಮತ್ತು ರಾಮಚಂದ್ರ ಭಟ್ ಮತ್ತು ಇತರ ಸಂಘಟನಾ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿ ಸ್ವಯಂಸೇವಕರು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಉಡುಪಿ: ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ
ಉಡುಪಿ: ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ
Date: