Home ಸುದ್ಧಿಗಳು ಪ್ರಾದೇಶಿಕ ದಿ. ಮೇಟಿ ಮುದಿಯಪ್ಪ ನೆನಪಿನ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ನಾಟಕ

ದಿ. ಮೇಟಿ ಮುದಿಯಪ್ಪ ನೆನಪಿನ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ನಾಟಕ

190
0

ಉಡುಪಿ, ಮೇ 24: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಶರಣ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡ್ಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಮೇ 26 ಭಾನುವಾರ ಸಂಜೆ 5:30ಕ್ಕೆ ದಿ. ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಡಾ. ಶ್ರೀಪಾದ್ ಭಟ್ ನಿರ್ದೇಶನದ ಮಂಟೇಸ್ವಾಮಿ ಕಾವ್ಯ ಪ್ರಯೋಗ ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿಯ ಸಭಾಂಗಣದಲ್ಲಿ ನಡೆಯಲಿದೆ.

ಯುವ ಕಥಾ ಸ್ಪರ್ಧೆಯಲ್ಲಿ ಡಾ. ನಮ್ರತಾ ಬಿ., ಡಾ. ಜಿ. ಪಿ. ನಾಗರಾಜ್, ರಾಮಾಂಜಿ ನಮ್ಮಭೂಮಿ, ಮಂಜುನಾಥ್ ಕಾರ್ತಟ್ಟು, ಮಂಜುನಾಥ್ ಹಿಲಿಯಾಣ ಆಯ್ಕೆಯಾಗಿದ್ದು ಇವರಿಗೆ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಕಥಾಪ್ರಶಸ್ತಿ ಹಾಗೂ ಬಹುಮಾನ ನೀಡಲಾಗುವುದು. ಇದೇ ಸಂದರ್ಭದಲ್ಲಿ ಮೇಟಿ ಮುದಿಯಪ್ಪ ಅವರ ಬದುಕು ಬರಹದ ಕುರಿತು ವಿಮರ್ಶಕ ಜಿ. ಪಿ. ಪ್ರಭಾಕರ್ ಉಪನ್ಯಾಸ ನೀಡಲಿದ್ದಾರೆ ಎಂದು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಹಾಗೂ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.