Wednesday, January 22, 2025
Wednesday, January 22, 2025

ಕೆ.ಎಂ.ಸಿ ಮಣಿಪಾಲ: ಮೇ 25 ರಂದು ‘ಓಪನ್ ಡೇ ‘ ಕಾರ್ಯಕ್ರಮ

ಕೆ.ಎಂ.ಸಿ ಮಣಿಪಾಲ: ಮೇ 25 ರಂದು ‘ಓಪನ್ ಡೇ ‘ ಕಾರ್ಯಕ್ರಮ

Date:

ಮಣಿಪಾಲ, ಮೇ 24: ಅಪರೂಪದ ಅನುವಂಶಿಕ ಅಸ್ವಸ್ಥತೆಗಳಲ್ಲಿ ವಿಶೇಷ ಸೇವೆಗಳಿಗೆ ಹೆಸರುವಾಸಿಯಾದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಜೆನೆಟಿಕ್ಸ್ (ತಳಿಶಾಸ್ತ್ರ) ವಿಭಾಗವು ಮೇ 25, 2024 ರ ಶನಿವಾರದಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ‘ಓಪನ್ ಡೇ’ ಕಾರ್ಯಕ್ರಮವನ್ನು ಆಯೋಜಿಸಲು ಸಜ್ಜಾಗಿದೆ. ಕಾರ್ಯಕ್ರಮವು ಮಣಿಪಾಲದ ಬೇಸಿಕ್ ಲೈಫ್ ಸೈನ್ಸ್ ಕಟ್ಟಡದ 3ನೇ ಮಹಡಿಯಲ್ಲಿರುವ ವೈದ್ಯಕೀಯ ತಳಿಶಾಸ್ತ್ರ ವಿಭಾಗದಲ್ಲಿ ನಡೆಯಲಿದೆ. ತಳಿಶಾಸ್ತ್ರ ಸಂಬಂಧಿತ ಆರೋಗ್ಯ ಮತ್ತು ರೋಗದ ಕುರಿತು ಎಲ್ಲರಿಗೂ ಪರಿಚಯಿಸಲು ಮೂಲಭೂತ ಪರಿಕಲ್ಪನೆಗಳೊಂದಿಗೆ ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ಎಲ್ಲಾ ವಯಸ್ಸಿನವರನ್ನು ತೊಡಗಿಸಿಕೊಳ್ಳುವ ವಿನೋದ ಚಟುವಟಿಕೆ ಮತ್ತು ತಿಳುವಳಿಕೆ, ಮಾಹಿತಿ ನೀಡುವ ಅನೇಕ ಸಂವಾದಾತ್ಮಕ ಆಟಗಳು ಮತ್ತು ರಸಪ್ರಶ್ನೆಗಳು ಇವೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಈ ಮಾಹಿತಿ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಲು ಎಲ್ಲಾ ವಿದ್ಯಾರ್ಥಿಗಳನ್ನು ಆಹ್ವಾನಿಸುತ್ತಿದೆ. ಪಾಲ್ಗೊಳ್ಳುವವರಿಗೆ ವಿಭಾಗದ ಸೌಲಭ್ಯಗಳನ್ನು ಅನ್ವೇಷಿಸಲು, ಅಂತರರಾಷ್ಟ್ರೀಯ ಮಾನದಂಡಗಳಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಗಳ ಬಗ್ಗೆ ತಿಳಿದುಕೊಳ್ಳಲು ಮತ್ತು ವೈದ್ಯಕೀಯ ತಳಿಶಾಸ್ತ್ರ ಕ್ಷೇತ್ರದಲ್ಲಿ ತಜ್ಞರೊಂದಿಗೆ ಸಂವಹನ ನಡೆಸಲು ಅವಕಾಶವಿದೆ.

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಜೆನೆಟಿಕ್ಸ್ (ತಳಿಶಾಸ್ತ್ರ) ವಿಭಾಗವು ಅಪರೂಪದ ಅನುವಂಶಿಕ ಪರಿಸ್ಥಿತಿಗಳಿಂದ ಪ್ರಭಾವಿತವಾಗಿರುವ ರೋಗಿಗಳು ಮತ್ತು ಕುಟುಂಬಗಳಿಗೆ ಸಮಗ್ರ ಸೇವೆಗಳನ್ನು ಒದಗಿಸಲು ಮೀಸಲಾಗಿರುವ ಭಾರತದ ಕೆಲವೇ ಕೇಂದ್ರಗಳಲ್ಲಿ ಒಂದಾಗಿದೆ. ಕ್ಲಿನಿಕಲ್ ಸೇವೆಗಳ ಜೊತೆಗೆ, ವಿಭಾಗವು ಅಂತರರಾಷ್ಟ್ರೀಯ ಮನ್ನಣೆಯನ್ನು ಗಳಿಸಿದ ಪ್ರವರ್ತಕ ಸಂಶೋಧನೆಯಲ್ಲಿ ಹೆಚ್ಚು ತೊಡಗಿಸಿಕೊಂಡಿದೆ. ‘ಓಪನ್ ಡೇ’ ಕಾರ್ಯಕ್ರಮದ ಕುರಿತಾದ ಹೆಚ್ಚಿನ ಮಾಹಿತಿಗಾಗಿ, ಕಸ್ತೂರ್ಬಾ ಆಸ್ಪತ್ರೆಯಲ್ಲಿರುವ ವೈದ್ಯಕೀಯ ಜೆನೆಟಿಕ್ಸ್ ವಿಭಾಗವನ್ನು ಸಂಪರ್ಕಿಸಿ 0820 2922836 ಗೆ ಕರೆ ಮಾಡಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!