ಉಡುಪಿ, ಮೇ 24: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ನೈರುತ್ಯ ಪದವೀಧರರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಪೂರ್ವ ತಯಾರಿ ಸಭೆ ಗುರುವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಗಳಾದ ಅಯನೂರು ಮಂಜುನಾಥ್ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಕೆ.ಕೆ ಮಂಜುನಾಥ್ ಅವರ ಗೆಲುವಿಗೆ ಕಾರ್ಯತಂತ್ರ ರೂಪಿಸಿ ತಮ್ಮ ತಮ್ಮ ಬೂತ್‌ನಲ್ಲಿರುವ ಪದವೀಧರರು ಹಾಗೂ ಶಿಕ್ಷಕರನ್ನು ಸಂಪರ್ಕಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮತದಾರರಿಗೆ ಮನವೊಲಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದರು. ಸುಧಾಕರ್ ದೇವಾಡಿಗ-ಬೈಲಕರೆ, ಐವಿ ಸರೋಜಿನಿ ಕರ್ಕಡ-ಕರಂಬಳ್ಳಿ ಹಾಗೂ ಮೆನ್ಕು ಪೂಜಾರ್ತಿ-ಸರಳೇಬೆಟ್ಟು ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ, ಜಿಲ್ಲೆಯ ಉಸ್ತುವಾರಿ ಎಂ.ಎಸ್ ಮೊಹಮ್ಮದ್, ನೈರುತ್ಯ ಪದವೀಧರರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಉಸ್ತುವಾರಿ ಪ್ರೊ. ಸುದೀಪ್ ಹೆಗ್ಡೆ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೀತಾ ವಾಗ್ಲೆ, ಪ್ರಸಾದ್‌ರಾಜ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್‌ನ ಉಸ್ತುವಾರಿ ವೈ ಸುಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಸ್ವಾಗತಿಸಿ, ಉಪಾಧ್ಯಕ್ಷರಾದ ಯುವರಾಜ್ ಪುತ್ತೂರು ವಂದಿಸಿದರು. ಉಪಾಧ್ಯಕ್ಷರಾದ ಸತೀಶ್ ಕೊಡವೂರು ಹಾಗೂ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿದರು.