ಬ್ರಹ್ಮಾವರ, ಮೇ 24: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಭಾರತೀಯ ಜನೌಷಧಿ ಕೇಂದ್ರ ಮತ್ತು ರೋಟರಿ ಕ್ಲಬ್ ಬ್ರಹ್ಮಾವರ ಇದರ ಸಂಯುಕ್ತ ಆಶ್ರಯದಲ್ಲಿ ಮಳೆ ಬೆಳೆಗಾಗಿ ಪ್ರಾಣಿ ಪಕ್ಷಿ ಸಂಕುಲ ಮನುಕುಲದ ಉಳಿವಿಗಾಗಿ ಪರಿಸರ ಜಾಗೃತಿ ವಿಚಾರ ಸಂಕಿರಣ ಮೇ 25 ರಂದು ಅಪರಾಹ್ನ 3 ರಿಂದ 5 ರವರೆಗೆ ರೋಟರಿ ಭವನದಲ್ಲಿ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್ ಮತ್ತು ಪರಿಸರ ಹೋರಾಟಗಾರ ಪ್ರೇಮಾನಂದ ಕಲ್ಮಾಡಿ ಭಾಗವಹಿಸಲಿದ್ದಾರೆ. ಪರಿಸರ ಪರ ಸಂಘ ಸಂಸ್ಥೆಗಳು, ಸಾರ್ವಜನಿಕರು ವಿಚಾರ ವಿನಿಮಯ ಮಾಡಲಿದ್ದಾರೆ ಎಂದು ಜಯಂಟ್ಸ್ ಅಧ್ಯಕ್ಷರಾದ ಸುಂದರ ಪೂಜಾರಿ ಮೂಡುಕುಕ್ಕುಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 25: ಬ್ರಹ್ಮಾವರದಲ್ಲಿ ಪರಿಸರ ವಿಚಾರ ಸಂಕಿರಣ
ಮೇ 25: ಬ್ರಹ್ಮಾವರದಲ್ಲಿ ಪರಿಸರ ವಿಚಾರ ಸಂಕಿರಣ
Date: