ಉಡುಪಿ, ಮೇ 27: ನೈಋತ್ಯ ಶಿಕ್ಷಕರ ಮತ್ತು ಪರವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ. ಜನತೆ ವಿಧಾನಸಭೆಯಲ್ಲಿ ಬದಲಾವಣೆ ಬಯಸಿದಂತೆ ಪದವೀಧರ, ಶಿಕ್ಷಕರ ಕ್ಷೇತ್ರಗಳಲ್ಲಿಯೂ ಬದಲಾವಣೆ ಬಯಸಿದ್ದಾರೆ. ಅಭಿವೃದ್ಧಿಯ ಮೂಲಕ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸುವುದು. ಕಾಂಗ್ರೆಸ್ ಪಕ್ಷದ ಸಿದ್ಧಾಂತ. ದೇಶದಲ್ಲಿಯೂ ಬದಲಾವಣೆಯ ಗಾಳಿ ಬೀಸುತ್ತಿದ್ದು, ಪ್ರಧಾನಿಗಳ ವಿಚಲಿತ ಹೇಳಿಕೆಗಳು ಇದಕ್ಕೆ ಸಾಕ್ಷಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು. ಅವರು ಕಾಂಗ್ರೆಸ್ ಭವನದಲ್ಲಿ ನಡೆದ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ ಸಭೆಯಲ್ಲಿ ಮಾತನಾಡುತ್ತಿದ್ದರು. ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆ ಮಾತನಾಡುತ್ತಾ, ನೈಋತ್ಯ ಶಿಕ್ಷಣ ಹಾಗೂ ಪದವೀಧರ ಕ್ಷೇತ್ರವು ಬಹಳಷ್ಟು ಶಿಕ್ಷಣದಲ್ಲಿ ಮುಂದುವರಿದ ಕ್ಷೇತ್ರ ಹಾಗೆಯೇ ಅಭಿವೃದ್ಧಿಯಲ್ಲಿಯೂ ಮುಂಚೂಣಿಯಲ್ಲಿದೆ. ಕಾಂಗ್ರೆಸ್ ಪಕ್ಷ ಎಲ್ಲರ ಹಿತ ಕಾಪಾಡುವಲ್ಲಿ ಕಂಕಣಬದ್ಧವಾಗಿದೆ. ಈ ಚುನಾವಣೆಯಲ್ಲಿ ಎಲ್ಲಾ ಮತದಾರರನ್ನು ತಲುಪಲು ಕಾರ್ಯಕರ್ತರಿಗೆ ಮಾತ್ರ ಸಾಧ್ಯ. ನಮ್ಮ ಸರಕಾರ ಒಂದು ವರ್ಷ ಪೂರೈಸಿದ್ದು, ಈ ಅವಧಿಯ ಜನಪರ ಕೆಲಸಗಳನ್ನು ಮುಂದಿಟ್ಟು ಗೆಲುವು ಸಾಧಿಸಬಹುದು. ಜನವರು ಕೋಮು ಭಾವನೆಯನ್ನು ಸ್ವೀಕರಿಸುವುದಿಲ್ಲ ಎನ್ನುವುದು ಕಳೆದ ವಿಧಾನಸಭಾ ಚುನಾವಣೆ ಫಲಿತಾಂಶದಿಂದ ಅರಿವಿಗೆ ಬರುತ್ತದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪ್ರಸ್ತಾವಿಕವಾಗಿ ಮಾತನಾಡಿ, ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಕಾರ್ಯ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಬ್ಲಾಕ್ ಅಧ್ಯಕ್ಷರುಗಳಿಗೆ ಜವಾಬ್ದಾರಿಗಳನ್ನು ನೀಡುವುದರೊಂದಿಗೆ ಉಸ್ತುವಾರಿಗಳನ್ನು ನಿಯೋಜಿಸಲಾಗಿದೆ. ಪ್ರತಿ ಹಂತದಲ್ಲಿಯೂ ಉಸ್ತುವಾರಿಗಳು ಪ್ರಗತಿಯ ವರದಿಯನ್ನು ಜಿಲ್ಲಾ ಕಾಂಗ್ರೆಸ್ಗೆ ನೀಡಲು ಆದೇಶಿಸಲಾಗಿದೆ ಎಂದರು.
ಸಭೆಯಲ್ಲಿ ಕೆಪಿಸಿಸಿ ಮುಖಂಡರಾದ ಎಮ್.ಎ.ಗಫೂರ್, ಜಿಲ್ಲಾ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಪ್ರಸಾದ್ ರಾಜ್ ಕಾಂಚನ್, ಶಹಿದ್, ದಿನೇಶ್ ಹೆಗ್ಡೆ ಮುಳುವಳ್ಳಿ, ಕೃಷ್ಣಪ್ಪ ಸುಳ್ಯ, ಡಾ. ಸುಧೀರ್ ಹೆಗ್ಡೆ, ನೀರೆ ಕೃಷ್ಣ ಶೆಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ, ಶಂಕರ್ ಕುಂದರ್, ಸಂತೋಷ್ ಕುಲಾಲ್, ನವೀನ ಚಂದ್ರ ಶೆಟ್ಟಿ, ರಮೇಶ್ ಕಾಂಚನ್, ಶಂಕರ್ ಕುಂದರ್, ಸದಾಶಿವ ದೇವಾಡಿಗ, ನವೀನ್ ಚಂದ್ರ ಸುವರ್ಣ, ಅರವಿಂದ ಪೂಜಾರಿ, ಡಾ. ಸುನಿತಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಕುಶಲ ಶೆಟ್ಟಿ, ಕಿಶೋರ್ ಕುಮಾರ್ ಎರ್ಮಾಳ್, ರೋಶನ್ ಶೆಟ್ಟಿ, ಸರ್ಪುದ್ದೀನ್ ಶೇಖ್, ಸುನಿಲ್ ಬಂಗೇರ, ಸತೀಶ್ ಕೊಡವೂರು, ಮಹಾಬಲ ಕುಂದರ್, ಸುರೇಂದ್ರ ಆಚಾರ್ಯ ಹಾಗೂ ಚುನಾವಣಾ ಉಸ್ತುವಾರಿಗಳು ಭಾಗವಹಿಸಿದ್ದರು. ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರೂಪಿಸಿದರು. ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಮುನಿಯಾಲ್ ವಂದಿಸಿದರು.