Sunday, January 19, 2025
Sunday, January 19, 2025

ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವ ಅಗತ್ಯತೆಯಿದೆ: ಡಾ.ಸುಮಂಗಲ

ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವ ಅಗತ್ಯತೆಯಿದೆ: ಡಾ.ಸುಮಂಗಲ

Date:

ಕೋಟ, ಮೇ 27: ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುವ ಅಗತ್ಯತೆಯಿದೆ ಎಂದು ತೆಕ್ಕಟ್ಟೆ ಶ್ರೀ ದೇವಿ ಕ್ಲಿನಿಕ್ ವೈದ್ಯೆ ಡಾ.ಸುಮಂಗಲ ಹೇಳಿದರು. ಕೋಟದ ಪಂಚವರ್ಣ ಮಹಿಳಾ ಮಂಡದ ಆಶ್ರಯದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲ ಹಾಗೂ ಕೋಟ ಗ್ರಾ.ಪಂ ಸಹಯೋಗದೊಂದಿಗೆ ಅರಿವು ನಿಮ್ಮಗಿರಲಿ ನೆರವು ೯ ನೇ ಮಾಲಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ನಮ್ಮಆಹಾರ ಕ್ರಮ, ದೈನಂದಿನ ಜೀವನ ಪದ್ದತಿಯ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವ ಅಗತ್ಯತೆಯನ್ನು ಒತ್ತಿ ಹೇಳಿದರು. ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟದ ಶಿಶು ಮಂದಿರದ ವ್ಯವಸ್ಥಾಪಕಿ ಭಾಗ್ಯ ವಾದಿರಾಜ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಕಾರ್ಕಡ ಗೆಳೆಯರ ಬಳಗ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ತರಬೇತುದಾರೆ ಆರತಿರಾಜ್ ಮತ್ತಿತರರು ಇದ್ದರು. ಪಂಚವರ್ಣ ಮಹಿಳಾ ಮಂಡಲದ ಪ್ರಧಾನ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ವಂದಿಸಿದರು. ಸಂಚಾಲಕಿ ಸುಜಾತ ಬಾಯರಿ ಪ್ರಾಸ್ತಾವಿಕವಾಗಿ ಮಾತನಾಡಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!