Monday, January 20, 2025
Monday, January 20, 2025

ಅಕ್ರಮ ಹೋಟೆಲ್ ಕಟ್ಟಡ ವಾರದೊಳಗೆ ತೆರವಿಗೆ ಕ್ರಮ ಕೈಗೊಳ್ಳಿ: ಯಶ್ಪಾಲ್ ಸುವರ್ಣ ಆಗ್ರಹ

ಅಕ್ರಮ ಹೋಟೆಲ್ ಕಟ್ಟಡ ವಾರದೊಳಗೆ ತೆರವಿಗೆ ಕ್ರಮ ಕೈಗೊಳ್ಳಿ: ಯಶ್ಪಾಲ್ ಸುವರ್ಣ ಆಗ್ರಹ

Date:

ಉಡುಪಿ, ಮೇ 27: ಉಡುಪಿ ನಗರಸಭೆ ವ್ಯಾಪ್ತಿಯ ಹೋಟೆಲ್ ಝಾರಾ ಸಹಿತ ಹಲವಾರು ಅಕ್ರಮ ಕಟ್ಟಡಗಳು ನಿಯಮಾವಳಿಗಳನ್ನು ಗಾಳಿಗೆ ತೂರಿ ನಿರ್ಮಾಣಗೊಂಡ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ನಗರಸಭೆ ಅಧಿಕಾರಿಗಳು ತಕ್ಷಣ ಈ ಬಗ್ಗೆ ಕ್ರಮ ವಹಿಸಿ ವಾರದೊಳಗೆ ಕಟ್ಟಡಗಳ ತೆರವಿಗೆ ಮುಂದಾಗುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ ಸಿಟಿ ಬಸ್ ಸ್ಟ್ಯಾಂಡ್ ಬಳಿಯ ಅಂಜುಮಾನ್ ರಸ್ತೆಯ ಝಾರಾ ಹೋಟೆಲ್ 2 ವರ್ಷದ ಹಿಂದೆ ನಗರಸಭೆ ತೆರವುಗೊಳಿಸಿದ್ದ ಜಾಗದಲ್ಲಿಯೇ ಮತ್ತೆ ಅದೇ ಹೋಟೆಲ್ ಅಕ್ರಮವಾಗಿ ತಲೆ ಎತ್ತಿದೆ. ರಸ್ತೆ ಸಂಚಾರಕ್ಕೆ ತೊಡಕಾಗುವಂತೆ ಅಕ್ರಮವಾಗಿ ಕಟ್ಟಡ ನಿರ್ಮಿಸಿರುವ ಬಗ್ಗೆ ನಗರಸಭೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದು, ಈ ಕಟ್ಟಡಕ್ಕೆ ನೀಡಿರುವ ಕಾನೂನು ಮೀರಿ ನೀಡಿರುವ ಅನುಮತಿಯನ್ನು ರದ್ದುಮಾಡಿ ತೆರವುಗೊಳಿಸುವಂತೆ ಈಗಾಗಲೇ ನಗರಸಭೆಗೆ ದೂರುಗಳು ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ಕಳೆದ ವರ್ಷದ ಏಪ್ರಿಲ್ ತಿಂಗಳಿನಿಂದ ನಗರಸಭೆಯಲ್ಲಿ ಕೌನ್ಸಿಲ್ ಅಸ್ತಿತ್ವದಲ್ಲಿಲ್ಲದ ಕಾರಣ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಈ ಅವಧಿಯಲ್ಲಿ ಅಧಿಕಾರಿಗಳು ರಾಜಾರೋಷವಾಗಿ ಅಕ್ರಮ ಕಟ್ಟಡಗಳಿಗೆ ಸಹಕಾರ ನೀಡುತ್ತಿದ್ದಾ ಎಂಬ ಆರೋಪ ನಿರಂತರವಾಗಿ ಕೇಳಿ ಬರುತ್ತಿದೆ. ನಗರಸಭೆಯ ವ್ಯಾಪ್ತಿಯ ಅಕ್ರಮ ಕಟ್ಟಡಗಳ ಬಗ್ಗೆ ಈ ನಿರ್ಲಕ್ಷ ಧೋರಣೆ ಹಾಗೂ ಪರೋಕ್ಷ ಸಹಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಾರದೊಳಗೆ ಈ ಅಕ್ರಮ ಹೋಟೆಲ್ ಕಟ್ಟಡಗಳ ತೆರವಿಗೆ ಮುಂದಾಗದಿದ್ದಲ್ಲಿ, ಸಾರ್ವಜನಿಕರು ಹಾಗೂ ಕಾರ್ಯಕರ್ತರೊಂದಿಗೆ ಈ ಕಟ್ಟಡಗಳ ವಿರುದ್ಧ ಪ್ರತಿಭಟನೆ ನಡೆಸಿ ತೆರವಿಗೆ ಮುಂದಾಗುವ ಸನ್ನಿವೇಶ ಸೃಷ್ಟಿಯಾದರೆ ಮುಂದಿನ ಎಲ್ಲಾ ಬೆಳವಣಿಗೆಗಳಿಗೆ ನಗರಸಭೆ ಪೌರಾಯುಕ್ತರೇ ಹೊಣೆಯಾಗಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!