Monday, January 20, 2025
Monday, January 20, 2025

ಮಣಿಪಾಲ: ಸರ್ವೋದಯ ಸಮ್ಮೇಳನ

ಮಣಿಪಾಲ: ಸರ್ವೋದಯ ಸಮ್ಮೇಳನ

Date:

ಮಣಿಪಾಲ, ಮೇ 27: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ -‘ಸರ್ವೋದಯ’ ವಾರ್ಷಿಕೋತ್ಸವ ಮತ್ತು ಸಮ್ಮೇಳನ ನಡೆಯಿತು. ಮಣಿಪಾಲ ಮಾಹೆ ವಿಶ್ವವಿದ್ಯಾಲಯದ ಸಹ ಕುಲಪತಿ ಡಾ. ಮಧು ವೀರರಾಘವನ್ ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಮಣಿಪಾಲ ವಿ. ವಿ. ಯು ಮುಕ್ತ ಕಲೆಗಳು ಮತ್ತು ಸಾಮಾಜಿಕ ವಿಜ್ಞಾನಗಳ ಅಧ್ಯಯನವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯೋಜನೆ ಹಾಕಿಕೊಂಡಿದ್ದು, ಈ ದಿಕ್ಕಿನಲ್ಲಿ ಪ್ರಯತ್ನ ಆರಂಭಗೊಂಡಿದೆ. ಸಂಶೋಧನೆ ಎನ್ನುವುದು ಎಲ್ಲ ಜ್ಞಾನಶಾಖೆಗಳ ಮೂಲಮಂತ್ರವಾಗಬೇಕಾಗಿದ್ದು, ಇದು ಕಲೆ ಮತ್ತು ಸಾಮಾಜಿಕ ವಿಜ್ಞಾನಗಳ ಕ್ಷೇತ್ರಕ್ಕೂ ಅನ್ವಯಿಸುತ್ತದೆ, ಎಂದರು. ಈ ನಿಟ್ಟಿನಲ್ಲಿ ಗಾಂಧಿಯನ್ ಸೆಂಟರ್ ನ ಪ್ರಯತ್ನಗಳನ್ನು ಶ್ಲಾಘಿಸಿದ ಅವರು, ಇಲ್ಲಿಯ ವಿದ್ಯಾರ್ಥಿಗಳ ಸಂಶೋಧನೆಗಳು ಮತ್ತು ಎರಡು ತಿಂಗಳ ಸಂಗೀತ ಮತ್ತು ನೃತ್ಯ ಶಿಕ್ಷಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಸಿಪಿಎಎಸ್ ನ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಇಲ್ಲಿಯ ಕೋರ್ಸ್ ಗಳಾದ ಏಕಾಸೊಫಿ, ಏಸ್ತೆಟಿಕ್ಸ್, ಪೀಸ್ ಸ್ಟಡೀಸ್ ಹಾಗೂ ಆರ್ಟ್ ಮೀಡಿಯಾಗಳನ್ನು ವಿವರಿಸಿದರು. ಎರಡು ತಿಂಗಳ ಭರತನಾಟ್ಯ ಶಿಕ್ಷಣವನ್ನು ನೀಡಿದ ನೃತ್ಯಕಲಾವಿದೆ ಡಾ. ಭ್ರಮರಿ ಶಿವಪ್ರಕಾಶ್ ಮತ್ತು ಸಂಗೀತ ಕಲಾವಿದೆ ಶ್ರಾವ್ಯ ಬಾಸ್ರಿ ಇವರು ಇದು ಕಲೆಯನ್ನು ಎಲ್ಲರೆಡೆಗೆ ಕೊಂಡೊಯ್ಯುವ ಪ್ರಯತ್ನ ಎಂದು ಹೇಳಿದರು.

ವಿದ್ಯಾರ್ಥಿಗಳಾದ ವೆಲಿಕಾ , ಶ್ರವಣ್, ಚಿನ್ಮಯೀ , ಸಾತ್ವಿಕ್ , ಆಕರ್ಷಿಕ ಮತ್ತು ಆಲಿಸ್ ಈ ಸಂದರ್ಭದಲ್ಲಿ ಸಾಹಿತ್ಯ, ಸಿನಿಮಾ, ನಾಟಕ, ರಾಜಕೀಯ – ಇತ್ಯಾದಿ ವಿಷಯಗಳ ಕುರಿತು , ತಮ್ಮ ಸಂಶೋಧನೆ ಮಂಡಿಸಿದರು. ಗೌತಮಿ ಕಾಕತ್ ಕರ್ ಕಾರ್ಯಕ್ರಮ ನಿರ್ವಹಿಸಿದರು. ಜಿಯೋಪೊಲಿಟಿಕ್ಸ್ ಮುಖ್ಯಸ್ಥೆ ಡಾ. ವಿಜಯಲಕ್ಷ್ಮಿ, ಡಾ. ಸುಧೀರ್ ರೆಡ್ಡಿ, ಡಾ. ರವೀಂದ್ರನಾಥನ್, ಡಾ. ರೇಸ್ಮಿ ಭಾಸ್ಕರನ್ ಮತ್ತು ಹಲವು ಕಲಾಸಕ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!