ಉಡುಪಿ, ಮೇ 28: ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ. ಬ್ಯಾಂಕಿನ ಸದಸ್ಯರ ಮಕ್ಕಳು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 90, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 85 ಹಾಗೂ 2023 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.80 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇಕಡಾ 75 ಅಂಕ ಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಸಾಮಾನ್ಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 95, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 90 ಹಾಗೂ 2023ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇಕಡಾ 85 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇಕಡಾ 80 ಅಂಕ ಪಡೆದಿರಬೇಕು. ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆ ಹಾಗೂ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ http://www.mahalakshmicoopbank.com ನಲ್ಲಿ ಜೂನ್ 5 ರಿಂದ ಲಭ್ಯವಿದ್ದು, ದಿನಾಂಕ: 15-07- 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಬ್ಯಾಂಕಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್‌ಪಾಲ್ ಎ ಸುವರ್ಣ
ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್‌ಪಾಲ್ ಎ ಸುವರ್ಣ
Date: