Sunday, January 19, 2025
Sunday, January 19, 2025

ಜ್ಞಾನಸುಧಾ: ಪ್ರತಿಷ್ಠಾ ಮಹೋತ್ಸವದ ಸಂಭ್ರಮ; ಪ್ರತಿಭಾ ಪುರಸ್ಕಾರ; 68.79 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

ಜ್ಞಾನಸುಧಾ: ಪ್ರತಿಷ್ಠಾ ಮಹೋತ್ಸವದ ಸಂಭ್ರಮ; ಪ್ರತಿಭಾ ಪುರಸ್ಕಾರ; 68.79 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

Date:

ಕಾರ್ಕಳ, ಮೇ 29: ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಬೆಳೆಸುತ್ತಿರುವ ಜ್ಞಾನಸುಧಾದ ಕಾರ್ಯವು ಸ್ತುತ್ಯಾರ್ಹವಾದುದು. ಡಾ.ಸುಧಾಕರ್ ಶೆಟ್ಟಿಯವರ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಉಡುಪಿಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದರು. ಅವರು ಬುಧವಾರ ಗಣಿತನಗರದ ಜ್ಞಾನಸುಧಾ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ೧೧ನೇ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಹಾಗೂ ಜ್ಞಾನಸುಧಾ ಪ್ರತಿಭಾ ಪುರಸ್ಕಾರದಲ್ಲಿ ಆಶೀರ್ವಚನ ನೀಡಿದರು.

ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಸಂಸ್ಥಾಪಕರಾದ ನಾಡೋಜ ಡಾ. ಜಿ. ಶಂಕರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮುಂದಿನ ಬದುಕಿನಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಜೀವನೋತ್ಸಾಹದ ಗಣಿಗಳಾಗ ಬೇಕು. ಆದರ್ಶ ನಡೆನುಡಿಯ ಮೂಲಕ ಸಮಾಜಮುಖಿಯಾಗಿ ಬೆಳೆಯ ಬೇಕು ಎಂದರು. ಡಾ.ಸುಧಾಕರ್ ಶೆಟ್ಟಿಯವರ ಮೂಲಕ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಸಮಾಜಕ್ಕೆ ನೀಡುತ್ತಿರುವ ಕೊಡುಗೆಯು ಆದರ್ಶನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ, ಸಮಾಜ ಸಂತೃಪ್ತಗೊಳಿಸುವ ಜ್ಞಾನಸುಧಾದ ಉದಾತ್ತ ಕಲ್ಪನೆ ಆದರಣೀಯ. ಇಲ್ಲಿನ ಸಿಬ್ಬಂದಿಗಳ ಒಮ್ಮನಸ್ಸಿನ ದುಡಿಮೆಯು ಅನ್ಯ ಸಂಸ್ಥೆಗಳಿಗೂ ಮಾದರಿ ಎಂದರು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಸನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು

ಪ್ರತಿಭಾ ಪುರಸ್ಕಾರ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ., ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು 68.79 ಲಕ್ಷ ರೂ ವಿದ್ಯಾರ್ಥಿವೇತನವನ್ನು ನೀಡಿ ಗೌರವಿಸಲಾಯಿತು. ಜೊತೆಗೆ ಉಪನ್ಯಾಸಕ ಹಾಗೂ ಶಿಕ್ಷಕರನ್ನು ಗುರುತಿಸಲಾಯಿತು. ಈ ಮೊದಲು 20 ಲಕ್ಷದಷ್ಟು ಪ್ರೋತ್ಸಾಹಧನವನ್ನು ನೀಡಿದ್ದು ಇಲ್ಲಿಯವರೆಗೆ ಒಟ್ಟು 90 ಲಕ್ಷದಷ್ಟು ರೂಪಾಯಿಯ ವಿದ್ಯಾರ್ಥಿವೇತನವನ್ನು ನೀಡಿದಂತಾಗುತ್ತದೆ. ಎರಡನೇ ಹಂತದ ವಿದ್ಯಾರ್ಥಿವೇತನವನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ 22 ಡಿಸೆಂಬರ್ 2024 ರ ಸಂಸ್ಥಾಪಕರ ದಿನಾಚರಣೆಯಂದು ವಿತರಿಸಲಾಗುವುದು. ಸಂಸ್ಥೆಯಲ್ಲಿ ಹತ್ತು ವರ್ಷದ ಸೇವೆ ಸಲ್ಲಿಸಿದ ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್‌, ಮೈಂಟೆನೆನ್ಸ್ ವಿಭಾಗದ ಹಿರಿಯ ಮೇಲ್ವಿಚಾರಕ ಶ್ರೀಕಾಂತ್ ಸುವರ್ಣ ಇವರನ್ನು ಸನ್ಮಾನಿಸಲಾಯಿತು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಸನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಜ್ವಲ್ ಕುಲಾಲ್ ನಿರೂಪಿಸಿ, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ ವಂದಿಸಿದರು. ಜ್ಞಾನಭಾರತ್ ಬಾಲವೃಂದ ಬಾಲೆಯರು ಪ್ರಾರ್ಥಿಸಿದರು. ಟ್ರಸ್ಟಿಗಳಾದ ವಿದ್ಯಾವತಿ.ಎಸ್.ಶೆಟ್ಟಿ, ಅನಿಲ್ ಕುಮಾರ್ ಜೈನ್, ಸಿಎ ನಿತ್ಯಾನಂದ ಪ್ರಭು, ಆಡಳಿತ ಮಂಡಳಿ ಸದಸ್ಯ ಶಾಂತಿರಾಜ್ ಹೆಗ್ಡೆ, ಕಾರ್ಕಳ ಜ್ಞಾನಸುಧಾ ಸಿ.ಇ.ಒ ಹಾಗೂ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರ್, ತ್ರಿವಳಿ ಸಂಸ್ಥೆಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!