Sunday, January 19, 2025
Sunday, January 19, 2025

ಮೆ 31: ಜ್ಞಾನಸುಧಾದಲ್ಲಿ ಸವ್ಯಸಾಚಿ ಸಂಭ್ರಮ

ಮೆ 31: ಜ್ಞಾನಸುಧಾದಲ್ಲಿ ಸವ್ಯಸಾಚಿ ಸಂಭ್ರಮ

Date:

ಕಾರ್ಕಳ, ಮೇ 29: ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಆರೋಗ್ಯ, ದೇಶಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ಸಮರ್ಪಿಸಿಕೊಂಡು ಅದ್ವೀತಿಯ ಸಾಧನೆ ಮಾಡಿರುವ ಆಧುನಿಕ ಮೂಡುಬಿದಿರೆಯ ನಿರ್ಮಾತೃ ಡಾ. ಎಂ. ಮೋಹನ ಆಳ್ವರಿಗೆ ಕಾರ್ಕಳ ಗಣಿತನಗರದ ಜ್ಞಾನಸುಧಾ ಆವರಣದಲ್ಲಿ ಮೇ 31ರ ಶುಕ್ರವಾರ ಸಂಜೆ 5:30ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಆಶೀರ್ವಚನ ನೀಡಲಿದ್ದಾರೆ. ನಿಟ್ಟೆ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಪುಸ್ತಕ ಅನಾವರಣ: ಆಳ್ವರಿಗೆ 72 ಸಂವತ್ಸರ ತುಂಬಿದ ಹಿನ್ನೆಲೆಯಲ್ಲಿ ಹೊರತರಲಾದ ಪುಸ್ತಕ ‘ಸವ್ಯಸಾಚಿ’ ಇದೇ ಸಂದರ್ಭದಲ್ಲಿ ಅನಾವರಣಗೊಳ್ಳಲಿದೆ. ಆಳ್ವರ ಕುರಿತಾದ ಈ ಪುಸ್ತಕ 208 ಪುಟಗಳನ್ನು ಹೊಂದಿದ್ದು, ವಿವಿಧ ಕ್ಷೇತ್ರದ 72 ಗಣ್ಯರ ಲೇಖನ ಒಳಗೊಂಡಿದೆ. ಆಳ್ವರ ಜೀವನ, ವ್ಯಕ್ತಿತ್ವ, ಸಾಧನೆಗಳ ಕುರಿತಾಗಿರುವ ಈ ಪುಸ್ತಕದಲ್ಲಿ ಅಪರೂಪದ ಮತ್ತು ಸುಂದರವಾದ ಚಿತ್ರಗಳು ಅಚ್ಚಾಗಿವೆ.

ಆರ್ಥಿಕ ನೆರವು: ಆಳ್ವರ ಹುಟ್ಟುಹಬ್ಬದ ಪ್ರಯುಕ್ತ ಅನಾರೋಗ್ಯದಿಂದ ಬಳಲುತ್ತಿರುವ 10 ಮಂದಿ ಹಾಗೂ 5 ಸಮಾಜ ಸೇವಾ ಸಂಸ್ಥೆಗಳಿಗೆ ತಲಾ 10ಸಾವಿರದಂತೆ ಆರ್ಥಿಕ ನೆರವನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ ನೀಡಲಿದೆ. ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಗೊಳಗಾಗುವ ರೋಗಿಗಳ ಶುಶ್ರೂಷೆಗಾಗಿ ರೂ.2ಲಕ್ಷ ಸಹಕಾರ ನೀಡಲಿದೆ. ಈ ಕಾರ್ಯಕ್ರಮದಲ್ಲಿ ಆಳ್ವರ ಹಿತೈಷಿಗಳು, ಸಾರ್ವಜನಿಕರು ಭಾಗವಹಿಸುವಂತೆ ಶಾಸಕ ವಿ. ಸುನಿಲ್‌ ಕುಮಾರ್‌, ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ (ರಿ.) ಅಧ್ಯಕ್ಷ ಡಾ. ಸುಧಾಕರ್‌ ಶೆಟ್ಟಿ, ಆಳ್ವರ ಅಭಿಮಾನಿಗಳ ಬಳಗ ಕಾರ್ಕಳ ವಿನಂತಿ ಮಾಡಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!