Sunday, November 24, 2024
Sunday, November 24, 2024

ಮತ ಎಣಿಕೆ: ಉಡುಪಿಯ ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ

ಮತ ಎಣಿಕೆ: ಉಡುಪಿಯ ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ

Date:

ಉಡುಪಿ, ಮೇ 29: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ-2024 ರ ಮತ ಎಣಿಕಾ ಕಾರ್ಯವು ಜೂನ್ 4 ರಂದು ಉಡುಪಿಯ ಅಜ್ಜರಕಾಡು ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿರುವ ಹಿನ್ನೆಲೆ, ಅಂದು ಬೆಳಗ್ಗೆ 5 ಗಂಟೆಯಿಂದ ಮತ ಎಣಿಕೆ ಮುಗಿಯುವ ವರೆಗೆ ಸದ್ರಿ ರಸ್ತೆಯಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ಈ ಕೆಳಗಿನಂತೆ ಮಾರ್ಪಾಡುಗಳನ್ನು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. ಜೂನ್ 4 ರಂದು ಬ್ರಹ್ಮಗಿರಿ ಜಂಕ್ಷನ್‌ನಿಂದ ನಾಯಕ್ ಕ್ಯಾಂಟೀನ್ ವರೆಗಿನ ಮತ್ತು ಅಜ್ಜರಕಾಡು ಜಂಕ್ಷನ್‌ನಿಂದ ಸುದರ್ಶನ್ ರೆಸಿಡೆನ್ಸಿ ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸಬೇಕು.

ಮತ ಎಣಿಕೆಯ ಸಂಬಂಧ ಸರಕಾರಿ ಅಧಿಕಾರಿಗಳ ವಾಹನಗಳ ಪಾರ್ಕಿಂಗ್ ದೃಷ್ಠಿಯಿಂದ ಜೂನ್ 4 ರಂದು ಬ್ರಹ್ಮಗಿರಿ ಜಂಕ್ಷನ್‌ನಿಂದ ಅಜ್ಜರಕಾಡು ಜಂಕ್ಷನ್ ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಹಾಗೂ ಅಜ್ಜರಕಾಡು ಜಂಕ್ಷನ್‌ನಿಂದ ಬ್ರಹ್ಮಗಿರಿ ಜಂಕ್ಷನ್ ವರೆಗಿನ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಬದಲಾಯಿಸಿದೆ. ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ನಿಯಮ 1989 ರ ನಿಯಮ 221 (5)(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಈ ಆದೇಶವನ್ನು ಹೊರಡಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!