Wednesday, July 29, 2026
Wednesday, July 29, 2026

ತೆಂಕನಿಡಿಯೂರು ಕಾಲೇಜು: ನೂತನ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

ತೆಂಕನಿಡಿಯೂರು ಕಾಲೇಜು: ನೂತನ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Date:

ಮಲ್ಪೆ, ಮೇ 30: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಂಡಿರುವ ಡಿಜಿಟಲ್ ಗ್ರಂಥಾಲಯವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಡಿಜಿಟಲ್ ಗ್ರಂಥಾಲಯವು ಇಂದಿನ ಸ್ಪರ್ಧಾತ್ಮಕ ಕಾಲಘಟ್ಟಕ್ಕೆ ಅತ್ಯಮೂಲ್ಯವಾಗಿದ್ದು, ಇದು ೩೦೦೦ ಕ್ಕೂ ಹೆಚ್ಚಿನ ಕಲಿಕಾ ಪುಸ್ತಕಗಳು, ೧೦೦ಕ್ಕೂ ಅಧಿಕ ಮ್ಯಾಗಝಿನ್‌ಗಳು ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಅನುಕೂಲವಾಗುವ ಪುಸ್ತಕಗಳನ್ನು ಒಳಗೊಂಡಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಎಡ್ವೆಸ್ ಸಂಸ್ಥಾಪಕ ಧೀರಜ್ ಮಂಗಳೂರು, ಗ್ರಂಥಪಾಲರಾದ ಕೃಷ್ಣ ಸಾಸ್ತಾನ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಾಧಾಕೃಷ್ಣ ಹಾಗೂ ಡಾ. ರಾಘವ ನಾಯ್ಕ, ಶೈಕಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ., ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ ಹಾಗೂ ಬೋಧಕ, ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ ಎನ್. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!