ಮಲ್ಪೆ, ಜೂ.1: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇದರ 2023-24ನೇ ಸಾಲಿನ ಎನ್.ಎಸ್.ಎಸ್. ವಾರ್ಷಿಕ ಶಿಬಿರದ ಉದ್ಘಾಟನೆ ಗರಡಿಮಜಲಿನ ಸಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದಿವಾಕರ ಶೆಟ್ಟಿ ಕೊಡವೂರು ಹಾಗೂ ಪದವಿಪೂರ್ವ ಕಾಲೇಜಿನ ಮುಖ್ಯಸ್ಥರಾದ ವಿಶ್ವನಾಥ ಕರಬ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿದ್ಯಾಸರಸ್ವತಿ, ಗಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಯಾನಂದ, ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ ಭಾಗವಹಿಸಿದ್ದರು. ಶಿಬಿರಾಧಿಕಾರಿಗಳಾದ ಡಾ. ರಘು ನಾಯ್ಕ, ಮಮತಾ ಭಾಗವಹಿಸಿದ್ದರು. ಅನುಷಾ ಸ್ವಾಗತಿಸಿದರು. ಸ್ಪೂರ್ತಿ ಕುಮಾರ್ ವಂದಿಸಿದರು. ವಿದ್ಯಾರ್ಥಿ ನಾಯಕಿ ಯವನಿಕಾ ಕಾರ್ಯಕ್ರಮ ನಿರೂಪಿಸಿದರು.
ಗರಡಿಮಜಲು: ಎನ್.ಎಸ್.ಎಸ್. ವಾರ್ಷಿಕ ಶಿಬಿರ ಉದ್ಘಾಟನೆ

ಗರಡಿಮಜಲು: ಎನ್.ಎಸ್.ಎಸ್. ವಾರ್ಷಿಕ ಶಿಬಿರ ಉದ್ಘಾಟನೆ
Date: