Monday, November 25, 2024
Monday, November 25, 2024

ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್ ನ ವಿದ್ಯಾರ್ಥಿಗಳು

ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್ ನ ವಿದ್ಯಾರ್ಥಿಗಳು

Date:

ಉಡುಪಿ, ಜೂ.3: ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 10 ರ‍್ಯಾಂಕ್‌ ಪಡೆದಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 21ನೇ ರ‍್ಯಾಂಕ್‌, ಬಿ.ಎನ್.ವೈ.ಎಸ್. ವಿಭಾಗದಲ್ಲಿ 24ನೇ ರ‍್ಯಾಂಕ್‌, ಬಿ.ಎಸ್.ಸಿ. ನರ್ಸಿಂಗ್ ವಿಭಾಗದಲ್ಲಿ 33 ನೇ ರ‍್ಯಾಂಕ್‌, ಪಶು ವೈದ್ಯಕೀಯ ವಿಭಾಗದಲ್ಲಿ 33ನೇ ರ‍್ಯಾಂಕ್‌, ಬಿ-ಫಾರ್ಮ್ ಮತ್ತು ಡಿ-ಫಾರ್ಮ್ ವಿಭಾಗಗಳಲ್ಲಿ 49 ನೇ ರ‍್ಯಾಂಕ್‌ ಗಳಿಸಿದ್ದಾರೆ. ವಿದ್ಯಾರ್ಥಿ ಶರತ್ ಹೆಚ್. ಪಿ. ಪಶು ವೈದ್ಯಕೀಯ ವಿಭಾಗದಲ್ಲಿ 26 ನೇ ರ‍್ಯಾಂಕ್‌, ಕೃಷಿ ವಿಜ್ಞಾನ ವಿಭಾಗದಲ್ಲಿ 37 ನೇ ರ‍್ಯಾಂಕ್‌ ಪಡೆದಿದ್ದಾರೆ. ಕಾರ್ತಿಕ್ ಎ. ಎಸ್. ಕೃಷಿ ವಿಜ್ಞಾನ ವಿಭಾಗದಲ್ಲಿ 62ನೇ ರ‍್ಯಾಂಕ್‌, ಅಭಿನವ್ ಹೆಚ್. ಬಿ. ಪಶು ವೈದ್ಯಕೀಯ ವಿಭಾಗದಲ್ಲಿ 74 ನೇ ರ‍್ಯಾಂಕ್‌ ಪಡೆದಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ122 ವಿದ್ಯಾರ್ಥಿಗಳು 1000 ರ‍್ಯಾಂಕ್‌ನೊಳಗೆ 122 ಮತ್ತು 210 ವಿದ್ಯಾರ್ಥಿಗಳು 2000 ರೊಳಗೆ ರ‍್ಯಾಂಕ್‌ಗಳನ್ನು ಗಳಿಸಿದ್ದಾರೆ. ಕಾಲೇಜು ಪ್ರಾರಂಭದಿಂದಲೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100 ಶೇಕಡಾ ಫಲಿತಾಂಶ ದಾಖಲಿಸಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!