Wednesday, October 9, 2024
Wednesday, October 9, 2024

ಕರಾವಳಿ ಹಿಂದುತ್ವದ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ ಕೋಟ ಗೆಲುವು: ಯಶ್ಪಾಲ್ ಸುವರ್ಣ

ಕರಾವಳಿ ಹಿಂದುತ್ವದ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ ಕೋಟ ಗೆಲುವು: ಯಶ್ಪಾಲ್ ಸುವರ್ಣ

Date:

ಉಡುಪಿ, ಜೂ.4: ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂಬುದನ್ನು ಜನತೆ ಸಾಬೀತು ಮಾಡಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಂತೋಷ ವ್ಯಕ್ತಪಡಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಯವರನ್ನು 2,58,903 ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಕ್ಷೇತ್ರದ ಜನತೆ ಕಾಂಗ್ರೆಸ್ ಸರಕಾರದ ಅವೈಜ್ಞಾನಿಕ ಗ್ಯಾರಂಟಿ ಭಾಗ್ಯಗಳನ್ನು ವಿರೋಧಿಸಿ, ಹಿಂದೂ ವಿರೋಧಿ ನೀತಿಗೆ ದಿಟ್ಟ ಉತ್ತರ ನೀಡಿ ಸಿದ್ಧರಾಮಯ್ಯ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 45,000 ಅಂತರದ ಮುನ್ನಡೆ ನೀಡಿದ್ದು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹತ್ತು ವರ್ಷಗಳ ಸಾಧನೆಗೆ ಜನ ಮನ್ನಣೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೋಟ ಶ್ರೀನಿವಾಸ ಪೂಜಾರಿಯವರು ಸಮರ್ಥ ಸಂಸದರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ...

ದಸರಾ ಪ್ರಯುಕ್ತ 2000 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು, ಅ.8: ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ...

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಅ.8: ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಅಂತರಾಷ್ಟ್ರೀಯ ವಿಪತ್ತು...

ವಿದ್ಯಾರ್ಥಿಗಳಿಗೆ ವೀರಗಾಥಾ ಕಾರ್ಯಕ್ರಮ

ಉಡುಪಿ, ಅ.8: ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಪ್ರೇಮ ಮತ್ತು ದೇಶ ಭಕ್ತರ ಕುರಿತು...
error: Content is protected !!