ಉಡುಪಿ, ಜೂ.5: ಉಡುಪಿ ನಗರಸಭೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಕರಾವಳಿ ಬೈಪಾಸ್ ಬಳಿ ಇರುವ ಡಿವೈಡರ್‌ನಲ್ಲಿ ನಗರಸಭಾ ಪೌರಾಯುಕ್ತ ರಾಯಪ್ಪ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ನಮ್ಮೆಲ್ಲರಿಗೆ ಸೃಷ್ಟಿ ನೀಡಿರುವಂತಹ ಅಮೂಲ್ಯವಾದ ಕೊಡುಗೆ ಪರಿಸರ. ಆದರೆ ಇಂದು ನಾವೆಲ್ಲ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದು, ಅಭಿವೃದ್ಧಿ ಹೆಸರಲ್ಲಿ ಮರಗಳನ್ನು ಕಡಿಯುವ ಮೂಲಕ ಪರಿಸರವನ್ನು ಹಾಳು ಮಾಡುತ್ತಿದ್ದೇವೆ. ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪರಿಸರ ಬಗ್ಗೆ ಪ್ರತಿಯೊಬ್ಬ ನಾಗರಿಕರಿಗೂ ತಿಳಿವಳಿಕೆ ಇರಬೇಕು ಎಂದರು. ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ನಗರಸಭೆ ವತಿಯಿಂದ ತ್ಯಾಜ್ಯವನ್ನು ಮೂಲದಲ್ಲೇ ಹಸಿಕಸ, ಒಣಕಸವನ್ನಾಗಿ ಬೇರ್ಪಡಿಸಿ ಮರುಬಳಕೆ ಮಾಡಿದರೆ ಮಾತ್ರ ಪರಿಸರ ಉಳಿಯುತ್ತದೆ. ಉಡುಪಿಯನ್ನು ತ್ಯಾಜ್ಯ ಮುಕ್ತ ನಗರವನ್ನಾಗಿಸಲು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು ಎಂದರು. ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹ ಕೆ.ಎಸ್, ಪ್ರಭಾರ ಆರೋಗ್ಯ ನಿರೀಕ್ಷಕ ಮನೋಹರ್, ಹರೀಶ್ ಬಿಲ್ಲವ, ಸುರೇಂದ್ರ ಹೋಬಳಿದಾರ್, ನಗರಸಭೆಯ ಸೂಪರ್ ವೈಸರ್‌ಗಳು ಉಪಸ್ಥಿತರಿದ್ದರು.
ನಗರಸಭೆಯಿಂದ ವಿಶ್ವ ಪರಿಸರ ದಿನಾಚರಣೆ
ನಗರಸಭೆಯಿಂದ ವಿಶ್ವ ಪರಿಸರ ದಿನಾಚರಣೆ
Date: