Tuesday, November 26, 2024
Tuesday, November 26, 2024

ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಗಣಕಯಂತ್ರ ವಿಷಯಗಳನ್ನು ಮನದಟ್ಟು ಮಾಡಲು ಸಮರ್ಥರಾಗಬೇಕು: ಮಾರುತಿ

ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಗಣಕಯಂತ್ರ ವಿಷಯಗಳನ್ನು ಮನದಟ್ಟು ಮಾಡಲು ಸಮರ್ಥರಾಗಬೇಕು: ಮಾರುತಿ

Date:

ಉಡುಪಿ, ಜೂ.7: ಪ್ರಥಮ ಪಿಯುಸಿ ಗಣಕವಿಜ್ಞಾನ ಪಠ್ಯಕ್ರಮ ಬದಲಾವಣೆಯಾದಾಗ ಬರುವ ಮೊದಲ ಹಂತ ಅಂದರೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಲು ಸಮರ್ಥರಾಗಬೇಕು ತಮ್ಮ ವೃತ್ತಿಯಲ್ಲಿ ಇನ್ನೂ ಪರಿಷ್ಕೃತಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಉತ್ತಮ ಅಂಕಗಳಿಸುವಲ್ಲಿ ಪೂರಕ ಶಕ್ತಿಯಾಗಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿರವರು ಹೇಳಿದರು. ಉಡುಪಿ ಜಿಲ್ಲಾ ಗಣಕವಿಜ್ಞಾನ ಉಪನ್ಯಾಸಕರ ಸಂಘದ ವತಿಯಿಂದ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್‌ ಇಲ್ಲಿ ನಡೆದ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಡುಪಿ ಜಿಲ್ಲಾ ಗಣಕವಿಜ್ಞಾನ ಉಪನ್ಯಾಸಕರಿಗೆ ‘ಪೈಥಾನ್‌ ಪ್ರೋಗ್ರಾಂಮಿಂಗ್‌’ ಸವಿವರವಾಗಿ ಪ್ರಾಯೋಗಿಕ ತರಗತಿ ಸಮೇತ ಕಾರ್ಯಗಾರವನ್ನು ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕವಿಜ್ಞಾನ ವಿಭಾಗದ ಉಪನ್ಯಾಸಕರಾದ ರಂಜನ್‌, ಗುರುಪ್ರಸಾದ್‌ ಹಾಗೂ ಯಶಸ್ವಿನಿ ನಡೆಸಿಕೊಟ್ಟು ಸೂಕ್ತ ಮಾರ್ಗದರ್ಶನ ನೀಡಿದರು. ಹಿರಿಯ ಉಪನ್ಯಾಸಕಿ ಆನಂದತೀರ್ಥ ಪ.ಪೂ ಕಾಲೇಜಿನ ಉಪಪ್ರಾಂಶುಪಾಲರಾದ ಕಮಲಾಕ್ಷಿ ಪ್ರಕಾಶ್‌ ಮಾತುಗಳನ್ನಾಡುತ್ತಾ, ಎಲ್ಲಾ ಉಪನ್ಯಾಸಕರು ಒಂದೇ ಸೂರಿನಡಿಯಲ್ಲಿ ಪಠ್ಯಕ್ರಮ ಬದಲಾವಣೆಗೆ ಸೂಕ್ತವಾಗಿ ಹೊಂದಿಕೊಂಡು ವಿದ್ಯಾರ್ಥಿಗಳಿಗೆ ಪೂರ್ಣಪ್ರಮಾಣದ ಜ್ಞಾನ ಒದಗಿಸುವ ಪ್ರಯತ್ನ ಮಾಡಬೇಕು ಎಂದು ನುಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್‌, ಉಡುಪಿ ಜಿಲ್ಲೆಯ ಎಲ್ಲಾ ಗಣಕ ವಿಜ್ಞಾನ ಉಪನ್ಯಾಸಕರು ನಮ್ಮ ದೇಶ ಗಣಕೀಕೃತ ದೇಶವಾಗಲು ರಾಯಭಾರಿಗಳು. ನಮ್ಮ ವಿದ್ಯಾರ್ಥಿಗಳಿಗೆ ಗಣಕವಿಜ್ಞಾನ ಸರಿಯಾಗಿ ತಿಳಿಸಿಕೊಟ್ಟರೆ ನಮ್ಮ ದೇಶ ಗಣಕೀಕೃತದಲ್ಲಿ ಮತ್ತೊಂದು ಹೆಜ್ಜೆ ಇರಿಸಿದಂತೆ ಎಂದರು.

ಸಂಘದ ನೂತನ ಅಧ್ಯಕ್ಷರನ್ನಾಗಿ ಕ್ರಿಯೇಟಿವ್‌ ಪ.ಪೂ ಕಾಲೇಜು ಕಾರ್ಕಳದ ಗಣಕವಿಜ್ಞಾನ ಉಪನ್ಯಾಸಕರಾದ ಜ್ಞಾನೇಶ್‌ ಕೋಟ್ಯಾನ್‌ ಇವರನ್ನು ನೇಮಿಸಲಾಯಿತು. ಕಾರ್ಯದರ್ಶಿಯಾಗಿ ಶಕುಂತಳ ರಾಜೇಶ್‌ ವಿದ್ಯೋದಯ ಪ.ಪೂ ಕಾಲೇಜು ಉಡುಪಿ, ಖಜಾಂಚಿಯಾಗಿ ಬಿನು ಜಯಚಂದ್ರ ಪಾಲನ್‌ ಸೆಂಟ್‌ ಮೇರಿಸ್‌ ಕಾಂಪೋಸಿಟ್‌ ಪ.ಪೂ ಕಾಲೇಜು ಕುಂದಾಪುರ ಇವರುಗಳನ್ನು ನೇಮಿಸಲಾಯಿತು. ನಿಕಟಪೂರ್ವ ಅಧ್ಯಕ್ಷರಾದ ರಾಮ ನಾಯ್ಕ ಸ್ವಾಗತಿಸಿ, ದಿವ್ಯ ಗಾಯತ್ರಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಅಬ್ಬನಡ್ಕ ಭಜಕೆರೆ ಗಮ್ಮತ್ತ್ದ ಕೆಸರ್ದಗೊಬ್ಬು

ಬೆಳ್ಮಣ್, ನ.26: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!