ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಬುಧವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪ್ರಾಂಶುಪಾಲರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕೌಶಲ್ಯಗಳಿಗೆ ಪ್ರಾಮುಖ್ಯತೆ ನೀಡಿದರೆ ಪರಿಣಾಮಕಾರಿ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದರು.
ಐಕ್ಯೂಎಸಿ ಸಂಯೋಜಕ ಡಾ. ಸುರೇಶ್ ರೈ ಮಾತನಾಡುತ್ತಾ, ವಿದ್ಯಾರ್ಥಿಗಳು ಶಿಕ್ಷಕರಿಗೆ, ಹೆತ್ತವರಿಗೆ ಹಾಗೂ ತಾವು ಕಲಿತ ಸಂಸ್ಥೆಗೆ ಗೌರವ ನೀಡಬೇಕು ಎಂದರು.
ಪಿ.ಹೆಚ್.ಡಿ ಪದವಿ ಪಡೆದ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಘವ ನಾಯ್ಕ್ ಹಾಗೂ ಸಮಾಜಕಾರ್ಯ ಉಪನ್ಯಾಸಕಿ ಡಾ. ಪ್ರಮೀಳಾ ವಾಜ್ ರನ್ನು ಗೌರವಿಸಲಾಯಿತು.
ಸ್ನಾತಕೋತ್ತರ ಸಮಾಜಕಾರ್ಯ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ಮಾತನಾಡುತ್ತಾ, ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವಲ್ಲಿ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು. ಬರಹಗಾರಿಕೆ, ಮಾತುಗಾರಿಕೆಯಲ್ಲಿ ಸ್ಪಷ್ಟತೆ ಇರಬೇಕು. ವಿಶ್ಲೇಷಣಾ ಗುಣ ಹಾಗೂ ಸಂಶೋಧನಾ ಮನಸ್ಸು ಇವುಗಳನ್ನು ಸ್ನಾತಕೋತ್ತರ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದರು.
ಸಹಾಯಕ ಪ್ರಾಧ್ಯಾಪಕಿ ಸುಷ್ಮಾ ಟಿ., ಉಷಾ, ರಾಜೇಶ್, ಶ್ರೀಕಲಾ, ರಾಜೇಂದ್ರ ಮೊಗವೀರ ಉಪಸ್ಥಿತರಿದ್ದರು.
ಅನುಷಾ, ರಕ್ಷಿತಾ ಪ್ರಾರ್ಥಿಸಿದರು. ಸ್ವಾತಿ ಸ್ವಾಗತಿಸಿ, ಶಬ್ಬೀರ್ ವಂದಿಸಿದರು. ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.