Sunday, November 24, 2024
Sunday, November 24, 2024

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಅತ್ಯುತ್ತಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಪ್ರಶಸ್ತಿ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಅತ್ಯುತ್ತಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಪ್ರಶಸ್ತಿ

Date:

ಉಡುಪಿ, ಜೂ.9: ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಮಹಾಮಂಡಳ ವತಿಯಿಂದ ಮುಂಬೈನಲ್ಲಿ ಆಯೋಜಿಸಿದ್ದ ಭಾರತ್ ಕೋ ಆಪರೇಟಿವ್ ಬ್ಯಾಂಕಿಂಗ್ ಸಮ್ಮಿತ್ 2024 ಸಮಾರಂಭದಲ್ಲಿ ಬ್ಯಾಂಕಿಂಗ್ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಪ್ರತಿಷ್ಠಿತ ಭಾರತ್ ರತ್ನ ಸಹಕಾರಿತ ಸಮ್ಮಾನ್ 2024 ಅತ್ಯುತ್ತಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಯ ಮೂಲಕ ಬ್ಯಾಂಕಿಂಗ್ ವ್ಯವಹಾರ ನಡೆಸುತ್ತಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗ್ರಾಹಕ ಸ್ನೇಹಿ ಸೇವೆಯೊಂದಿಗೆ ನಿರಂತರ ಪ್ರಗತಿ ದಾಖಲಿಸುತ್ತಾ ರಾಜ್ಯದ ಪ್ರತಿಷ್ಟಿತ ಪಟ್ಟಣ ಸಹಕಾರಿ ಸಂಸ್ಥೆಯಾಗಿ ಬೆಳೆದು ನಿಂತಿದೆ.

ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ರವರಿಗೆ ಕೇಂದ್ರ ಸರಕಾರದ ಮಾಹಿತಿ ಹಾಗೂ ಸಂವಹನ ಇಲಾಖೆಯ ಜಂಟಿ ಕಾರ್ಯದರ್ಶಿ ಸುಮ್ನೇಶ್ ಜೋಷಿ
ಪ್ರಶಸ್ತಿ ಪ್ರದಾನ ಮಾಡಿದರು. ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕರಾದ ಶರತ್ ಶೆಟ್ಟಿ ಎನ್., ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶಾರಿಕ ಕಿರಣ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...
error: Content is protected !!