Wednesday, November 27, 2024
Wednesday, November 27, 2024

ಸೃಜನಶೀಲ ಉದ್ಯಮಗಳಲ್ಲಿ ಕಲಾ ವಿದ್ಯಾರ್ಥಿಗಳಿಗೆ ಅನೇಕ ಅವಕಾಶಗಳಿವೆ: ವನಿತಾ ಪೈ

ಸೃಜನಶೀಲ ಉದ್ಯಮಗಳಲ್ಲಿ ಕಲಾ ವಿದ್ಯಾರ್ಥಿಗಳಿಗೆ ಅನೇಕ ಅವಕಾಶಗಳಿವೆ: ವನಿತಾ ಪೈ

Date:

ಮಣಿಪಾಲ, ಜೂ.14: ವಿದ್ಯಾರ್ಥಿಗಳು ಇತರರ ನೋವು ನಲಿವುಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರೆ ಉತ್ತಮ ಕಲಾವಿದರಾಗಬಹುದು ಎಂದು ಮಣಿಪಾಲದ ಕಲಾವಿದೆ ಉದ್ಯಮಿ ವನಿತಾ ಪೈ ಹೇಳಿದರು. ಅವರು ಮಾಹೆಯ ಗಾಂಧಿಯನ್ ಸೆಂಟರ್ ಫ಼ಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್‌ನ ವಿದ್ಯಾರ್ಥಿಗಳ ಪ್ರಾಜೆಕ್ಟ್‌ಗಳ ಪ್ರದರ್ಶನ ‘ಸ್ವ-ಕೃತಿ’ಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಉತ್ತಮ ಕಲೆಗೆ ಯಾವುದೇ ಒಳದಾರಿಗಳಿಲ್ಲ. ಕಠಿಣ ಪರಿಶ್ರಮ ಮತ್ತು ಇತರರ ನೋವನ್ನು ಅರ್ಥಮಾಡಿಕೊಳ್ಳುವ ಮೂಲಕ ಒಬ್ಬ ಉತ್ತಮ ಕಲಾವಿದನಾಗಬಹುದು ಎಂದು ಅವರು ಅಭಿಪ್ರಾಯಪಟ್ಟರು. ಸೃಜನಶೀಲ ಉದ್ಯಮಗಳಲ್ಲಿ ಕಲಾ ವಿದ್ಯಾರ್ಥಿಗಳಿಗೆ ಅನೇಕ ಅವಕಾಶಗಳಿವೆ. ವಿದ್ಯಾರ್ಥಿಗಳು ಸಿದ್ಧರಾಗಿರಬೇಕು ಮತ್ತು ತಮ್ಮ ಆಯ್ಕೆಗಳನ್ನು ಮುಕ್ತವಾಗಿಟ್ಟುಕೊಳ್ಳಬೇಕು. ಭಾರತದಲ್ಲಿ ಉತ್ತಮ ಕಲಾವಿದರಿದ್ದಾರೆ. ಉತ್ತಮ ಕಲಾ ಶಿಕ್ಷಣದ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಎಸ್ಥೆಟಿಕ್ಸ್, ಇಕಾಸೊಫಿ, ಪೀಸ್ ಮತ್ತು ಮೀಡಿಯಾ ವಿದ್ಯಾರ್ಥಿಗಳು- ಶ್ರವಣ್ ಬಾಸ್ರಿ (ಛಾಯಾಗ್ರಹಣ-ತೆಯ್ಯಂ), ಚಿನ್ಮಯಿ ಬಾಲ್ಕರ್ (ಕಾವ್ಯದ ಮೇಲಿನ ವರ್ಣಚಿತ್ರಗಳು), ವೆಲಿಕಾ (ವಿನ್ಯಾಸ), ಆಕರ್ಷಿಕಾ ಸಿಂಗ್ (ಕವನ), ಡೆಸ್ಮಂಡ್ ದಾಸ್ (ಅವಿಭಜಿತ ದಕ್ಷಿಣ ಕನ್ನಡದ ಪ್ರವಾಸ ಪುಸ್ತಕ), ಸಂಪದ ಭಾಗವತ. (ಕಿರು ಚಲನಚಿತ್ರ)- ದಿನವಿಡೀ ತಮ್ಮ ಪ್ರಾಜೆಕ್ಟ್‌ಗಳ ಪ್ರದರ್ಶನವನ್ನು ನಡೆಸಿಕೊಟ್ಟರು. ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಮಾತನಾಡಿ, ವಿದ್ಯಾರ್ಥಿಗಳು ಅಪಾರ ಸಾಮರ್ಥ್ಯ ಹೊಂದಿದ್ದು, ಅದು ನಿಜವಾಗಿ ಅವರ ಪ್ರಾಜೆಕ್ಟ್‌ಗಳಲ್ಲಿ ಪ್ರತಿಫಲಿಸುತ್ತದೆ. ವಿಭಾಗದ ಕೋರ್ಸ್‌ಗಳು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಇಂತಹ ಪ್ರಾಜೆಕ್ಟ್‌ಗಳ ಪ್ರೋತ್ಸಾಹಿಸುತ್ತವೆ ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಇತರರು ಪ್ರದರ್ಶನಕ್ಕೆ ಭೇಟಿ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!