Sunday, January 19, 2025
Sunday, January 19, 2025

ನಗರಸಭೆ ಕಂದಾಯ ವಿಭಾಗದ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಸಭೆ

ನಗರಸಭೆ ಕಂದಾಯ ವಿಭಾಗದ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಸಭೆ

Date:

ಉಡುಪಿ, ಜೂ.15: ಉಡುಪಿ ನಗರಸಭೆಯ ಕಂದಾಯ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಂದಾಯ ವಿಭಾಗಕ್ಕೆ ಸಂಬಂಧಿಸಿದ ಕಡತಗಳ ತುರ್ತು ವಿಲೇವಾರಿಗೆ ಆದ್ಯತೆ ನೀಡುವಂತೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರಸಭೆಯಲ್ಲಿ ಇ – ಖಾತಾ ಅರ್ಜಿಗಳ ಪ್ರಕ್ರಿಯೆ ತೀವ್ರ ವಿಳಂಬವಾಗುತ್ತಿದ್ದು, ಕಂದಾಯ ವಿಭಾಗಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳಿಗೆ ಹಲವು ಬಾರಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿದೆ.

ಮನೆ ಹಾಗೂ ವಾಣಿಜ್ಯ ಕಟ್ಟಡಗಳ ತೆರಿಗೆ ಪಾವತಿಗೆ ಸೂಕ್ತ ವ್ಯವಸ್ಥೆ, ಸರ್ವರ್ ಸಮಸ್ಯೆ ಪರಿಹಾರಕ್ಕೆ ಕೈಗೊಳ್ಳಬೇಕು. ನಗರಸಭೆಗೆ ಸಂಬಂಧಿಸಿದ ಜಾಗಗಳನ್ನು ಗುರುತಿಸಿ ಸುಪರ್ದಿಗೆ ಪಡೆಯಲು ಕ್ರಮ ವಹಿಸಬೇಕು. ವಿವಿಧ ಮೂಲಗಳ ತೆರಿಗೆ ಸಂಗ್ರಹದ ಜೊತೆಗೆ ಬಾಕಿ ಇರುವ ತೆರಿಗೆ ಸಂಗ್ರಹಣೆಗೆ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ರಿಕ್ಷಾ ನಿಲ್ದಾಣ, ಬಸ್ ನಿಲ್ದಾಣ ನಿರ್ಮಾಣ, ವಾಣಿಜ್ಯ ಸಂಕೀರ್ಣಗಳ ನಿರ್ವಹಣೆ ಸಹಿತ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಹೇಳಿದರು.

ನಗರಸಭೆ ಪೌರಾಯುಕ್ತರಾದ ರಾಯಪ್ಪ, ಕಂದಾಯ ಅಧಿಕಾರಿ ಸಂತೋಷ್, ಕಂದಾಯ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!