Sunday, January 19, 2025
Sunday, January 19, 2025

ರಾಜ್ಯದಲ್ಲಿಯೇ ಅತ್ಯುತ್ತಮ ಫಲಿತಾಂಶಕ್ಕೆ ಮಾದರಿ ತೆಂಕನಿಡಿಯೂರು ಕಾಲೇಜು: ಯಶ್ಫಾಲ್ ಸುವರ್ಣ

ರಾಜ್ಯದಲ್ಲಿಯೇ ಅತ್ಯುತ್ತಮ ಫಲಿತಾಂಶಕ್ಕೆ ಮಾದರಿ ತೆಂಕನಿಡಿಯೂರು ಕಾಲೇಜು: ಯಶ್ಫಾಲ್ ಸುವರ್ಣ

Date:

ಉಡುಪಿ, ಜೂ.15: 2022-23ನೇ ಸಾಲಿನ ಸುಶಾಸನ ದಿನದ ಪ್ರಯುಕ್ತ ಶಿಕ್ಷಣ ಇಲಾಖೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದನ್ನು ಅತ್ಯುತ್ತಮ ಫಲಿತಾಂಶ ಗಳಿಸಿದ ಕಾಲೇಜು ಎಂದು ಘೋಷಿಸಿದೆ. ಇದು ನನ್ನ ವಿಧಾನಸಭಾ ಕ್ಷೇತ್ರದಲ್ಲಿದೆ ಎಂಬುದೇ ಹೆಮ್ಮೆ ಎಂದು ಉಡುಪಿಯ ಶಾಸಕ ಯಶ್‌ಪಾಲ ಸುವರ್ಣ ಹೇಳಿದರು. ಅವರು ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. 2006 ರಿಂದ ಇಂದಿನ ವರೆಗೆ 52 ರ‍್ಯಾಂಕ್‌ಗಳನ್ನು ಗಳಿಸಿದ ಈ ಕಾಲೇಜಿನ ಸಾಧನೆ ನಿಜಕ್ಕೂ ಅಭಿನಂದನೀಯ. ಇದಕ್ಕಾಗಿ ಶ್ರಮಿಸಿದ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ. ಹಾಗೂ ಎಲ್ಲಾ ಬೋಧಕ ವರ್ಗದವರನ್ನು ಶಾಸಕರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಂ.ಎ. ಇತಿಹಾಸ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ದಯೇಶ್, ಎಂ.ಎ. ಸಮಾಜಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ನಾಗರತ್ನ, ಬಿ.ಎಸ್.ಡಬ್ಲ್ಯೂನಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ಅನ್ವಿತಾ ಜಿ.ವಿ., ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಸುರೇಶ್, ಧನುಷ್ ಪ್ರಥಮ ಬಿ.ಕಾಂ., ಪೂಜಾ ತೃತೀಯ ಬಿ.ಎ. ಇವರುಗಳನ್ನು ಸನ್ಮಾನಿಸಿದ ಶಾಸಕರು ಅವರಿಗೆ ತಲಾ ರೂ. 2,000/- ರೂಗಳ ಪ್ರೋತ್ಸಾಹ ಧನವನ್ನು ನೀಡಿ ಪ್ರೋತ್ಸಾಹಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉಡುಪಿ ತುಳುಕೂಟ ಹಾಗೂ ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಜಯಕರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಎಷ್ಟು ಬುದ್ಧಿವಂತರಿದ್ದಾರೆ, ಎಷ್ಟು ಚೆನ್ನಾಗಿದ್ದಾರೆ ಅಥವಾ ಎಷ್ಟು ಚೆನ್ನಾಗಿ ಸಂಪರ್ಕಗಳನ್ನು ಹೊಂದಿದ್ದಾರೆ ಎಂಬುದು ಲೆಕ್ಕಕ್ಕೆ ಬರುವುದಿಲ್ಲ. ಪರಿಶ್ರಮ ಹಾಗೂ ಆತ್ಮವಿಶ್ವಾಸವಿದ್ದರೆ ಮಾತ್ರ ಯಶಸ್ವಿ ವ್ಯಕ್ತಿಗಳಾಗಬಹುದು. ನಮ್ಮ ಜೀವನ ಪಠ್ಯಕ್ರಮ ಇಲ್ಲದ, ಪ್ರಶ್ನೆ ಪತ್ರಿಕೆ ಹಾಗೂ ಮಾದರಿ ಪ್ರಶ್ನೆ ಪತ್ರಿಕೆ ಇಲ್ಲದ ಒಂದು ಪರೀಕ್ಷೆ. ಕ್ರಿಯೆ ಇಲ್ಲದ ದೃಷ್ಟಿ ಕೇವಲ ಕನಸಾಗಿ ಉಳಿಸುತ್ತದೆ. ಕನಸಿಲ್ಲದ ಕ್ರಿಯೆಯಿಂದ ಕೇವಲ ಕಾಲಹರಣವಾಗುತ್ತದೆ ಆದರೆ ಕ್ರಿಯೆ ಮತ್ತು ಕನಸು ಒಟ್ಟಾದರೆ ಪ್ರಪಂಚವನ್ನೇ ಬದಲಾಯಿಸಬಹುದು ಎಂದು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ. ಸಮಾರಂಭದ ಅಧ್ಯಕ್ಷತೆ ವಹಿಸಿ, ಕಾಲೇಜಿನ ಬಗ್ಗೆ ಕಿರು ಪಕ್ಷಿನೋಟವನ್ನು ತೆರೆದಿಟ್ಟದರು. ಅಲ್ಲದೆ ಇದೇ ಸಂದರ್ಭದಲ್ಲಿ ೨೦೨೩-೨೪ನೇ ಸಾಲಿನಲ್ಲಿ ವಯೋನಿವೃತ್ತಿ ಹೊಂದಿದ ಸಿಬ್ಬಂದಿಗಳಾದ ಶೇಖ್ ಸಾಬ್ಜಾನ್ ಸಾಹೇಬ್, ಜಾನಿ ಕೆ.ಎಂ. ಹಾಗೂ ವರ್ಗಾವಣೆಗೊಂಡ ಅಬ್ರಾಹಂ ಚಾಕೋ ಅವರುಗಳನ್ನು ಗೌರವಿಸಲಾಯಿತು. ನೆಟ್ ಮತ್ತು ಸ್ಲೆಟ್ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಉಡುಪಿ ಅಮೃತ್‌ನ ಅಧ್ಯಕ್ಷೆ ಭಾರತಿ ಹೆಚ್.ಎಸ್., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಜಾತ ಆಚಾರ್ಯ, ಉಡುಪಿಯ ಸಾಫಲ್ಯ ಟ್ರಸ್ಟ್ನ ನಿರುಪಮಾ ಶೆಟ್ಟಿ, ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ., ವಿದ್ಯಾಥಿ ಕ್ಷೇಮಪಾಲನಾ ಸಮಿತಿಯ
ಸಂಚಾಲಕರಾದ ರಾಧಾಕೃಷ್ಣ ಮತ್ತು ಡಾ. ರಾಘವ ನಾಯ್ಕ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಕೃಷ್ಣ ಸಾಸ್ತಾನ ಮತ್ತು ರತ್ನಮಾಲಾ, ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ, ಆಂಗ್ಲಭಾಷಾ ಸಹ ಪ್ರಾಧ್ಯಾಪಕರಾದ ನಿತ್ಯಾನಂದ ವಿ. ಗಾಂವಕರ್ ಹಾಗೂ ಎಲ್ಲಾ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಹಾಗೂ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ನೀಲಾವರ ನಿರೂಪಿಸಿದರು. ನಿಶಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!