ಗಂಗೊಳ್ಳಿ, ಜೂ.16: ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಲ್ಲಿ ಪರಿಶ್ರಮವನ್ನು ಪಡಬೇಕು. ಆಗ ಯಶಸ್ಸು ತಾನಾಗಿಯೇ ಬರುತ್ತದೆ ಎಂದು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು. ಯಾವುದೇ ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಹೇಳಿದರು. ಒಟ್ಟು 140 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಬಿಲ್ಲವರ ಹಿತರಕ್ಷಣ ವೇದಿಕೆ ಉಪಾಧ್ಯಕ್ಷ ಜಿ.ಕೆ ವೆಂಕಟೇಶ ಕೊಡೇರಿ ಮನೆ ಸ್ವಾಗತಿಸಿ, ಅನಂತ ಪೂಜಾರಿ ಕೊಡೇರಿ ಮನೆ ಕಾರ್ಯಕ್ರಮ ನಿರ್ವಹಿಸಿದರು. ಆಕಾಶ್ ಪೂಜಾರಿ ವಂದಿಸಿದರು.
ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಕಲಿಕಾ ಸಾಮಗ್ರಿಗಳ ವಿತರಣೆ
ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಕಲಿಕಾ ಸಾಮಗ್ರಿಗಳ ವಿತರಣೆ
Date: