Tuesday, February 25, 2025
Tuesday, February 25, 2025

ಸರ್ವಸ್ಪರ್ಶಿ ಸರ್ವವ್ಯಾಪಿ ಧ್ಯೇಯದ ಜನಪರ ಬಜೆಟ್: ಯಶ್ಪಾಲ್ ಸುವರ್ಣ

ಸರ್ವಸ್ಪರ್ಶಿ ಸರ್ವವ್ಯಾಪಿ ಧ್ಯೇಯದ ಜನಪರ ಬಜೆಟ್: ಯಶ್ಪಾಲ್ ಸುವರ್ಣ

Date:

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ 2022-23ನೇ ಸಾಲಿನ ಬಜೆಟ್ ಸರ್ವಸ್ಪರ್ಶಿ ಸರ್ವವ್ಯಾಪಿ ಧ್ಯೇಯದೊಂದಿಗೆ ಜನಪರವಾಗಿದ್ದು ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸರ್ವರಿಗೂ ಸಮಪಾಲು ಸಮಬಾಳು ಸಿದ್ದಾಂತದಲ್ಲಿ ಬಜೆಟ್ ಮಂಡಿಸಿದ್ದಾರೆ.

ಕರಾವಳಿ ಜಿಲ್ಲೆಯ ಮೀನುಗಾರಿಕೆ ಬಂದರು ಅಭಿವೃದ್ಧಿಗೆ ಗರಿಷ್ಠ ಅನುದಾನ, ವಸತಿ ರಹಿತ  ಮೀನುಗಾರರಿಗೆ 5000 ವಸತಿ  ನಿರ್ಮಾಣ, ಮತ್ಸ್ಯ ಸಿರಿ ಯೋಜನೆಯ ಮೂಲಕ ಅಳ ಸಮುದ್ರ ಮೀನುಗಾರಿಕೆ ಉತ್ತೇಜನ ನೀಡಲು ಮುಂದಾಗಿರುವುದು ಶ್ಲಾಘನೀಯ.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ, ಶ್ರೀ ನಾರಾಯಣ ಗುರು ವಸತಿ ಶಾಲೆಗಳ ನಿರ್ಮಾಣ, ಕಡಲ ತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಮಾನದಂಡಗಳ ಸರಳೀಕರಣ, ಕಾರವಾರದಲ್ಲಿ ರಾಜ್ಯದ ಮೊದಲ ಜಲಸಾರಿಗೆ ಮತ್ತು  ಮೀನುಗಾರಿಕೆ ತರಬೇತಿ ಸಂಸ್ಥೆ ಸ್ಥಾಪನೆ, ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರುಜಾರಿ, ಗೋ ಶಾಲೆಗಳ ಗೋವು ದತ್ತು ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಪುಣ್ಯ ಕೋಟಿ ದತ್ತು ಯೋಜನೆಗೆ ಚಾಲನೆ,  ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಶಾಲಾ ಕಾಲೇಜುಗಳ ಉನ್ನತೀಕರಣಕ್ಕೆ ಅನುದಾನ ಒದಗಿಸುವ ಮೂಲಕ ಜನಪರ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳಿಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...
error: Content is protected !!