Sunday, September 29, 2024
Sunday, September 29, 2024

ಕೃಷ್ಣಾನುಗ್ರಹ ಮಕ್ಕಳ ಕೇಂದ್ರದಲ್ಲಿ ವನಮಹೋತ್ಸವ

ಕೃಷ್ಣಾನುಗ್ರಹ ಮಕ್ಕಳ ಕೇಂದ್ರದಲ್ಲಿ ವನಮಹೋತ್ಸವ

Date:

ಉಡುಪಿ, ಜೂ.23: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಶ್ರೀ ಕೃಷ್ಣಾನುಗ್ರಹ ಮಕ್ಕಳ ಕೇಂದ್ರ ಮಮತೆಯ ತೊಟ್ಟಿಲಿನಲ್ಲಿ ವನಮಹೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ಖ್ಯಾತ ಮೂಳೆ ರೋಗ ತಜ್ಞ ಹಾಗೂ ಸಂಸ್ಥೆಯ ಅಧ್ಯಕ್ಷ ಡಾ. ಉಮೇಶ್ ಪ್ರಭು ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ಪರಿಸರವನ್ನು ಚೆನ್ನಾಗಿ ಸಂರಕ್ಷಣೆ ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ಗಿಡಗಳನ್ನು ನೆಟ್ಟು ಪಾಲನೆ ಮಾಡಬೇಕು. ಈ ಸಂಸ್ಥೆಯಲ್ಲಿ ಈ ರೀತಿಯ ಕಾರ್ಯಕ್ರಮ ಮೊದಲಾಗಿ ನಡೆಯುತ್ತಿದೆ ಎಂದರು.

ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಪ್ರದಾನ ಕಾರ್ಯದರ್ಶಿ ರಾಜೇಶ್ ಭಟ್ ಪಣಿಯಾಡಿ, ಕೋಶಾಧಿಕಾರಿ ಕುಮಾರಸ್ವಾಮಿ ಉಡುಪ, ನಿಕಟಪೂರ್ವ ಅಧ್ಯಕ್ಷ ಚೈತನ್ಯ ಎಂ.ಜಿ., ಉಪಾಧ್ಯಕ್ಷ ರಘುಪತಿ ರಾವ್, ಕಸಾಪ ಉಡುಪಿ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸ್ವಾಮಿ ಚಿಕ್ಕಮಠ, ಕರವೇ ಉಡುಪಿ ಜಿಲ್ಲಾ ಸಂಚಾಲಕ ಪ್ರಭಾಕರ ಪೂಜಾರಿ, ಕೃಷ್ಣಾನುಗ್ರಹ ಮಕ್ಕಳ ಕೇಂದ್ರದ ಮುಖ್ಯಸ್ಥ ಉದಯ್ ಕುಮಾರ್, ಧನ್ವಂತರಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗು ರೋಟರಾಕ್ಟ್ ಕ್ಲಬ್ ನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಚಂದ್ರಕಾಂತ್ ಕೆ.ಎನ್ ಸ್ವಾಗತಿಸಿ, ವಿಷ್ಣುಪ್ರಸಾದ್ ಪಾಡಿಗಾರು ನಿರೂಪಿಸಿದರು. ರಾಘವೇಂದ್ರ ಪ್ರಭು, ಕರ್ವಾಲು ವಂದಿಸಿದರು. ಡಾ. ಶ್ರೀಪತಿ ರಾವ್ ಪ್ರಾರ್ಥಿಸಿದರು. ಸಂಸ್ಥೆಯ ಆವರಣದಲ್ಲಿ ವಿವಿಧ ಹಣ್ಣಿನ ಸಸ್ಯಗಳನ್ನು ನೆಡಲಾಯಿತು. ಅದೇ ರೀತಿ ಗಿಡಗಳನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!