Sunday, January 19, 2025
Sunday, January 19, 2025

ಕೋಟ ಪಡುಕರೆ ಕಾಲೇಜು: ವಾರ್ಷಿಕೋತ್ಸವ ಸಂಭ್ರಮ

ಕೋಟ ಪಡುಕರೆ ಕಾಲೇಜು: ವಾರ್ಷಿಕೋತ್ಸವ ಸಂಭ್ರಮ

Date:

ಕೋಟ, ಜೂ.23: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಗೀತಾನಂದ ಫೌಂಡೇಶನ್‌ ಪ್ರವರ್ತಕರಾದ ಆನಂದ್‌ಸಿ ಕುಂದರ್‌ ಮಾತನಾಡಿ, ವಿದ್ಯಾರ್ಥಿಗಳು ತಾವು ಕಲಿತ ಜ್ಞಾನವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ, ಅನೇಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಹಾಗೂ ಪರಿಸರವನ್ನು ಪ್ರೀತಿಸಿ, ʼಹಸಿರೇ ಉಸಿರುʼ ಎಂಬ ತತ್ವವನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಪ್ರಧಾನ ಉಪನ್ಯಾಸವನ್ನು ನಿವೃತ್ತ ಇಂಗ್ಲೀಷ್‌ ಪ್ರಾಧ್ಯಾಪಕರು ಮತ್ತು ಲೇಖಕಿ ಡಾ. ಪಾರ್ವತಿ ಐತಾಳ್‌ ನೀಡಿದರು. ಪಠ್ಯ ಪುಸ್ತಕದಲ್ಲಿ ಪಡೆದ ಜ್ಞಾನದ ಕುರಿತು ಚಿಂತನೆ ಮಾಡುವುದು ಶಿಕ್ಷಣದ ಪ್ರಮುಖ ಉದ್ದೇಶವಾಗಿರಬೇಕು. ಅಂಕಗಳಿಗೆ ಮಹತ್ವ ಕೊಡುತ್ತಿರುವ ಈ ಸಮಾಜದಲ್ಲಿ ಜ್ಞಾನ, ಮೌಲ್ಯಗಳಿಗೆ ಪ್ರಾಮುಖ್ಯತೆ ಕೊಡುವ ಶಿಕ್ಷಣದ ಅವಶ್ಯಕತೆಯಿದೆ ಎಂದು ತಿಳಿಸಿದರು.

ಪ್ರಾಂಶುಪಾಲರಾದ ಡಾ ಸುನೀತ ವಿ ಕಾಲೇಜಿನ ವಾರ್ಷಿಕ ವರದಿಯನ್ನು 2023-24ರಲ್ಲಾದ ಶೈಕ್ಷಣಿಕ ಪ್ರಗತಿ ಮತ್ತು ಪಠ್ಯ-ಪಠ್ಯೇತರ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ 2022-23ರಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ 44 ವಿದ್ಯಾರ್ಥಿಗಳಿಗೆ ಮತ್ತು ಪ್ರಸ್ತುತ ತರಗತಿಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಹಾಗೂ ವಿಷಯವಾರು 100ರಲ್ಲಿ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್‌ ವತಿಯಿಂದ ನಗದು ಬಹುಮಾನವನ್ನು ನೀಡಲಾಯಿತು. ಸಾಂಸ್ಕ್ರತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶಂಕರ ನಾಯ್ಕ ಬಿ ಸ್ವಾಗತಿಸಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ. ಮನೋಜ್‌ ಕುಮಾರ್‌ಎಂ ವಂದಿಸಿದರು. ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಜಣ್ಣ ಎಂ ನಿರೂಪಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸುರೇಶ್‌ ಪೂಜಾರಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಫಾತಿಮಾ, ಸಿಂಚನಾ, ದೀಕ್ಷಿತಾ, ಮೇಘನಾ ಮತ್ತು ಸುದೀಪ್‌, ಕಾಲೇಜಿನ ಬೋಧಕ-ಬೋಧಕೇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!