Sunday, January 19, 2025
Sunday, January 19, 2025

ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ, ಉನ್ನತೀಕರಣ: ಅರ್ಜಿ ಆಹ್ವಾನ

ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ, ಉನ್ನತೀಕರಣ: ಅರ್ಜಿ ಆಹ್ವಾನ

Date:

ಉಡುಪಿ, ಜೂ.25: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಅಸಂಘಟಿತ ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಹೊಸ ಘಟಕ ಸ್ಥಾಪನೆಗೆ ಮತ್ತು ಚಾಲ್ತಿಯಲ್ಲಿರುವ ಆಹಾರ ಸಂಸ್ಕರಣ ಘಟಕಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಒಟ್ಟಾರೆ ಶೇ. 50 ರ ಸಹಾಯಧನ ಸೌಲಭ್ಯ ಲಭ್ಯವಿದ್ದು, ಈ ಯೋಜನೆಯ ಫಲಾನುಭವಿಯಾಗಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ತೆಂಗಿನಎಣ್ಣೆ ತಯಾರಿಕೆ, ಒಣಮೀನು ತಯಾರಿಕೆ, ಬೇಕರಿ ಉತ್ಪನ್ನಗಳು, ಹಪ್ಪಳ ತಯಾರಿಕೆ, ಸಾಗರೋತ್ಪನ್ನ ಉತ್ಪನ್ನಗಳು, ಮಸಾಲ ಪದಾರ್ಥಗಳು, ಹಾಲಿನ ಉತ್ಪನ್ನಗಳು, ಪಶು ಆಹಾರ ತಯಾರಿಕೆ ಹಾಗೂ ತೆಂಗಿನ ಸಂಸ್ಕರಣಾ ಘಟಕಗಳಿಗೆ ಬೇಡಿಕೆಯಿದ್ದು, ರೈತರು ಮತ್ತು ಉದ್ದಿಮೆದಾರರು ಈ ಯೋಜನೆಯ ನೆರವನ್ನು ಪಡೆದು ಸ್ವ-ಉದ್ಯಮವನ್ನು ಸ್ಥಾಪಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಸೂರಜ್ ಶೆಟ್ಟಿ ಮೊ.ನಂ: 9019075051, ವೆಂಕಟೇಶ್ ನಾಯ್ಕ್ ಮೊ.ನಂ: 8310353519, ರೂಪಶ್ರೀ ಮೊ.ನಂ: 9606324279, ಡಾ. ರಾಜೇಶ್ ಡಿ.ಪಿ ಮೊ.ನಂ: 8453782414, ರಾಜೇಶ್ ಶಿಂಧೆ ಮೊ.ನಂ: 9620521058, ಫಜಲ್ ಮೊ.ನಂ: 9448549130 ಹಾಗೂ ಜೇಬಾ ಸೆಲ್ವಾನ್ ಮೊ.ನಂ: 9880821945 ಅನ್ನು ಸಂಪರ್ಕಿಸಬಹದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!