ಕೋಟ, ಜೂ.27: ಪಠ್ಯ ಹಾಗೂ ಸಹಪಠ್ಯ ಚಟುವಟಿಕೆಗಳಿಗೆ ವಿಶೇಷ ಆದ್ಯತೆ ನೀಡಿ ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಅವಕಾಶ ನೀಡುತ್ತಿರುವ ಹೆಸಕುತ್ತೂರು ಪ್ರಾಥಮಿಕ ಶಾಲೆ ಮಾದರಿಯಾಗಿದೆ ಎಂದು ನಿವೃತ್ತ ಮುಖ್ಯ ಶಿಕ್ಷಕ ರಾಜೀವ ಶೆಟ್ಟಿ ಶಿರಿಯಾರ ಹೇಳಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸಕುತ್ತೂರು ಇಲ್ಲಿ ನೂತನವಾಗಿ ಆರಂಭಿಸಲಾದ ಚೆಸ್ ತರಗತಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಕರಾದ ಸಂಜೀವ ಎಂ., ಜಯಕ್ಷ್ಮಿ ಬಿ., ವಿಜಯ ಶೆಟ್ಟಿ, ಸ್ವಾತಿ ಬಿ ಉಪಸ್ಥಿತರಿದ್ದರು. ಚೆಸ್ ತರಬೇತಿ ನೀಡಲಿರುವ ಕುಂದಾಪುರದ ಕಶ್ವಿ ಚೆಸ್ ಸ್ಕೂಲ್‌ನ ನರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿ, ರವೀಂದ್ರ ನಾಯಕ್ ವಂದಿಸಿದರು. ಶಿಕ್ಷಕ ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಹೆಸಕುತ್ತೂರು ಶಾಲೆ: ಚೆಸ್ ತರಗತಿ ಉದ್ಘಾಟನೆ
ಹೆಸಕುತ್ತೂರು ಶಾಲೆ: ಚೆಸ್ ತರಗತಿ ಉದ್ಘಾಟನೆ
Date: