ಉಡುಪಿ, ಜೂ.27: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ, ಮರಗಳ ಕೆಳಗೆ ನಿಲ್ಲಬಾರದು. ಸಾರ್ವಜನಿಕರು ತಗ್ಗು ಪ್ರದೇಶ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪಬೇಕು ಅಥವಾ ಅಗತ್ಯವಿದ್ದಲ್ಲಿ ಈಗಾಗಲೇ ಸಂಬಂಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆಯಬೇಕು. ತುರ್ತು ಸೇವೆಗೆ ಶುಲ್ಕ ರಹಿತ ಸಂಖ್ಯೆ: 1077 ಹಾಗೂ ದೂ.ಸಂ:0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರ ಕಚೇರಿ ಪ್ರಕಟಣೆ ತಿಳಿಸಿದೆ.
ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆ; ಮಾರ್ಗಸೂಚಿ ಪ್ರಕಟ
ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆ; ಮಾರ್ಗಸೂಚಿ ಪ್ರಕಟ
Date: